ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊಟ್ಟ ಮೊದಲ ಬಜೆಟ್ ಮಂಡನೆ ಮಾಡಲು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ಧರಾಗಿದ್ದಾರೆ.
ಜುಲೈ 5 ರಂದು ಮಂಡಿಸಲಿರುವ ಬಜೆಟ್ ನಲ್ಲಿ ಚುನಾವಣಾ ಪ್ರಣಾಳಿಕೆಯಂತೆ ರೈತರ ಸಾಲ ಮನ್ನಾ ಘೋಷಣೆ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುವ ಪಡಿತರ ಧಾನ್ಯಗಳ ಮೇಲಿನ ಸಬ್ಸಿಡಿಯಲ್ಲಿ ಬೃಹತ್ ಪ್ರಮಾಣದ ದುರುಪಯೋಗ ಕಂಡುಬಂದಿದ್ದು, ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.