ರಾಜಕೀಯ

ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

Sumana Upadhyaya

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕನಾಗಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬಿಜೆಪಿ 20, ಕಾಂಗ್ರೆಸ್ 34 ಹಾಗೂ ಜೆಡಿಎಸ್ 14 ಸದಸ್ಯ ಬಲ ಹೊಂದಿವೆ. ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರು ಶಾಸಕರಾಗಿ ಆಯ್ಕೆಯಾದ ನಂತರ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಸ್ಥಾನ ಖಾಲಿ ಉಳಿದಿತ್ತು.

ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅಪಾರ ಜ್ಞಾನ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಕಲಾಪದ ವೇಳೆ ಸರ್ಕಾರವನ್ನು ಪ್ರಶ್ನೆ ಮಾಡುವುದರಲ್ಲಿ ಮತ್ತು ಇಕ್ಕಟ್ಟಿಗೆ ಸಿಲುಕಿಸುವುದರಲ್ಲಿ ಸಮರ್ಥರು ಎಂದು ಕಂಡುಬಂದ ಹಿನ್ನಲೆಯಲ್ಲಿ ಬಿಜೆಪಿ ಅವರನ್ನು ವಿಧಾನಪರಿಷತ್ ಪ್ರತಿಪಕ್ಷ ನಾಯಕನಾಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ವಿಧಾನಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಹಂಗಾಮಿ ಅಧ್ಯಕ್ಷರಾಗಿರುವ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

SCROLL FOR NEXT