ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿಯವರು 'ಯೂ ಟರ್ನ್' ಮುಖ್ಯಮಂತ್ರಿ: ಬಿಜೆಪಿ ಲೇವಡಿ

ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ನಿಗೂಢ ಸಾವು ಮತ್ತು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ...

ಬೆಂಗಳೂರು: ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ನಿಗೂಢ ಸಾವು ಮತ್ತು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಗಳಲ್ಲಿ ಸಚಿವ ಕೆ ಜೆ ಜಾರ್ಜ್ ಅವರ ಪರವಹಿಸಿ ನಿನ್ನೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮಾತನಾಡಿದ್ದು ಪ್ರತಿಪಕ್ಷ ಬಿಜೆಪಿಯ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಈ ಕುರಿತು ತನ್ನ ಟ್ವಿಟ್ಟರ್ ಪೇಜ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಹೆಚ್ ಡಿ ಕುಮಾರಸ್ವಾಮಿಯವರು ಯೂಟರ್ನ್ ಮುಖ್ಯಮಂತ್ರಿ ಎಂದು ಸಾಬೀತಾಗಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಯೂಟರ್ನ್ ಸೂಚನಾ ಫಲಕಗಳಿರುವ ಜಾಗಗಳಲ್ಲಿ ಕುಮಾರಸ್ವಾಮಿಯವರ ಫೋಟೋ ಹಾಕಬೇಕು ಎಂದು ಲೇವಡಿ ಮಾಡಿದೆ.

ನಾಲ್ಕು ವರ್ಷದ ಹಿಂದೆ ಡಿ ಕೆ ರವಿಯವರ ನಿಗೂಢ ಸಾವಿನ ಸಮಯದಲ್ಲಿ ಸಚಿವ ಕೆ ಜೆ ಜಾರ್ಜ್ ಅವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದಾಗ  ಜಾರ್ಜ್ ರಂತಹ ಸಚಿವರು ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಹೇಳಿದ್ದರು.ಇಂದು ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿಯವರ ಸರ್ಕಾರದಲ್ಲಿ ಕೆ ಜೆ ಜಾರ್ಜ್ ಸಂಪುಟ ದರ್ಜೆ ಸಚಿವರಾಗಿರುವುದು ಮಾತ್ರವಲ್ಲದೆ ಅವರು ಅಮಾಯಕ ವ್ಯಕ್ತಿ ಎಂದು ಕುಮಾರಸ್ವಾಮಿಯವರು ಘೋಷಿಸಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕುಮಾರಸ್ವಾಮಿಯವರ ಈ ಮಾತುಗಳಿಂದಲೇ ಅವರು ಎಂತಹ ವ್ಯಕ್ತಿ, ಎಷ್ಟು ಪ್ರಾಮಾಣಿಕರು, ಅವರು ನುಡಿದಂತೆ ನಡೆಯುವವರೇ ಎಂದು ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ.

ಸಚಿವ ಕೆ ಜೆ ಜಾರ್ಜ್ ಅವರನ್ನು ನಿನ್ನೆ ವಿಧಾನಸಭೆಯಲ್ಲಿ ಬಲವಾಗಿ ಸಮರ್ಥಿಸಿಕೊಂಡ ಕುಮಾರಸ್ವಾಮಿಯವರು ಅವರಿಗೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯದ ಪ್ರಸ್ತಾವದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಸಿಬಿಐ ನೀಡಿರುವ ವರದಿಯಲ್ಲಿ ಜಾರ್ಜ್ ಪಾತ್ರವಿಲ್ಲ. ಇನ್ನು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ನನಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಜಾರ್ಜ್ ಅವರ ಪಾತ್ರವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT