ಡಿ.ಕೆ.ಶಿವಕುಮಾರ್ ಮತ್ತು ಗೂಳಿಹಟ್ಟಿ ಶೇಖರ್ 
ರಾಜಕೀಯ

ಸಚಿವ ಡಿಕೆ ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ!

ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸಮ್ಮಿಶ್ರ ಸರ್ಕಾರದ ನೂತನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗೆ ಮಂಗಳವಾರ ಔತಣಕೂಟವನ್ನು ಆಯೋಜಿಸಿದ್ದು, ಈ ಔತಣಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕಾಣಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ...

ಬೆಂಗಳೂರು; ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸಮ್ಮಿಶ್ರ ಸರ್ಕಾರದ ನೂತನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗೆ ಮಂಗಳವಾರ ಔತಣಕೂಟವನ್ನು ಆಯೋಜಿಸಿದ್ದು, ಈ ಔತಣಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕಾಣಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ. 
ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಭೋಜನ ಕೂಟಕ್ಕೆ ರಾತ್ರಿ 8ಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾತ್ರಿ 11 ಗಂಟೆವರೆಗೂ ಇದ್ದರು, ಔತಣಕೂಟದಲ್ಲಿ ಪಾಲ್ಗೊಂಡಿದ್ದವರೊಂದಿಗೆ ಬೆರೆತು 3 ಗಂಟೆ ಕಾಲ ಕಾಳೆದರು. 
'
ಕುತೂಹಲಕಾರಿ ಸಂಗತಿಯೆಂದರೆ, ಹೆಚ್.ಡಿ.ರೇವಣ್ಣ ಸಹ ಔತಣಕೂಟದಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು. ಇದಕ್ಕೂ ಮೀರಿದ ಅಚ್ಚರಿ ಎಂದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಯೋಜಿಸಿದ್ದ ಈ ಔತಣ ಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕೂಡ ಕಾಣಿಸಿಕೊಕಂಡಿದ್ದು. 
ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಗೂಳಿಹಟ್ಟಿ ಶೇಖರ್ ಅವರು ಆಗಮಿಸಿದ್ದರು ಎಂದು ಹೇಳಲಾಗುತ್ತಿದೆ. 
ಸಮ್ಮಿಶ್ರ ಸರ್ಕಾರ ಮಿತ್ರಪಕ್ಷಗಳ ಕೂಟದಲ್ಲಿ ಪ್ರತಿಪಕ್ಷ ಬಿಜೆಪಿಯ ಏಕೈಕ ಶಾಸಕ ಪಾಲ್ಗೊಂಡಿರುವುದು ಇದೀಗ ಹಲವರ ಹುಬ್ಬೇರುವಂತೆ ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT