ರಾಜಕೀಯ

ಕುಮಾರಸ್ವಾಮಿ ನಂಬಿ ಗರ್ಭಿಣಿಯಾದರೆ ಬೀದಿಗೆ ಬರುತ್ತಿದ್ದರು: ಆಯನೂರು ಮಂಜುನಾಥ್

Lingaraj Badiger
ಬೆಂಗಳೂರು: ಮಹಿಳೆಯರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತು ಕೇಳಿ ಗರ್ಭಿಣಿಯಾಗಿದ್ದರೆ ಬೀದಿಗೆ ಬರುತ್ತಿದ್ದರು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಜೆಡಿಎಸ್ ಪ್ರಣಾಳಿಕೆಗೆ ಟಾಂಗ್ ನೀಡಿದ್ದಾರೆ.
ಕುಮಾರಸ್ವಾಮಿ ಅವರು ಜೆಡಿಎಸ್ ಪ್ರಣಾಳಿಕೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಪ್ರತಿ ತಿಂಗಳು 6 ಸಾವಿರ ರುಪಾಯಿ ಕೊಡುತ್ತೇನೆಂದು ಭರವಸೆ ನೀಡಿದ್ದರು. ಇಂದು ವಿಧಾನ ಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಆಯನೂರು ಮಂಜುನಾಥ್ ಅವರು, ಕುಮಾರಸ್ವಾಮಿ ಮಾತು ತಪ್ಪಿದ್ದಾರೆ. ಅವರ ಮಾತನ್ನು ಮಹಿಳೆಯರು ಕೇಳಿ, ಗರ್ಭಿಣಿಯಾಗಿದ್ದರೆ ಅವರ ಸ್ಥಿತಿ ಹರೋಹರ ಎಂದರು.
ಆಯನೂರು ಮಂಜುನಾಥ್ ಅವರು ಬಳಸಿದ ಪದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು.
ಸಭಾನಾಯಕಿ ಡಾ. ಜಯಮಾಲಾ, ಆಡಳಿತ ಪಕ್ಷದ ಸದಸ್ಯರಾದ ವಿ.ಎಸ್. ಉಗ್ರಪ್ಪ, ಜಯಮ್ಮ ಬಾಲರಾಜು, ವೀಣಾ ಅಚ್ಚಯ್ಯ ಅವರು ಮಂಜುನಾಥ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಯಾರು ಯಾರನ್ನು ಕೇಳಿ ಗರ್ಭಿಣಿಯಾಗುವುದಿಲ್ಲ. ನಿಮ್ಮನ್ನು ಹೆರುವಾಗ ನಿಮ್ಮ ತಾಯಿ ಯಾರನ್ನಾದರೂ ಕೇಳಿ ಗರ್ಭಿಣಿಯಾಗಿದ್ದರೆ ಎಂದು ಪ್ರಶ್ನಿಸಿದರು. ಇದರಿಂದ ಮತ್ತೆ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ ನಡುವೆ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.
ಈ ವೇಳೆ ಮಧ್ಯ ಪ್ರವೇಶಿಸಿದ ವಿ.ಎಸ್. ಉಗ್ರಪ್ಪ ಅವರು, ಹೆಣ್ಣು ಮಕ್ಕಳ ಬಗ್ಗೆ ಅಗೌರವದಿಂದ ನಡೆದುಕೊಳ್ಳುವ ಸಂಸ್ಕೃತಿ ಸರಿಯಲ್ಲ. ಇದು ಮನು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ತಿರುಗೇಟು ನೀಡಿದರು.
SCROLL FOR NEXT