ಹೆಚ್ ಸಿ ಮಹದೇವಪ್ಪ 
ರಾಜಕೀಯ

ನಾನೇ ಅಲ್ಲ, ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಹೋಗಲ್ಲ: ಹೆಚ್‍ಸಿ ಮಹದೇವಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಹೆಚ್ ಸಿ ಮಹದೇವಪ್ಪ ಅವರು ಬಿಜೆಪಿ ಸೇರುತ್ತಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ...

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಹೆಚ್ ಸಿ ಮಹದೇವಪ್ಪ ಅವರು ಬಿಜೆಪಿ ಸೇರುತ್ತಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಮಹದೇವಪ್ಪ ಅವರು ನಾನೇ ಅಲ್ಲ, ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಸೇರಲ್ಲ ಎಂದು ಹೇಳಿದ್ದಾರೆ. 
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಹದೇವಪ್ಪ ಅವರು ನಾನು 12 ವರ್ಷಗಳ ಹಿಂದೆಯೇ ಹೇಳಿದ್ದೆ, ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಹೋಗುವುದಿಲ್ಲ ಎಂದು ಈಗಲೂ ಅದನ್ನೇ ಹೇಳುತ್ತೇನೆ ಎಂದು ಹೇಳಿದರು. 
ಇಲ್ಲಿ ಸೋತು ಅಲ್ಲಿಗೆ ಹೋಗುವುದು, ಅಲ್ಲಿ ಸೋತಾಗ ಇಲ್ಲಿಗೆ ಬರುವವನು ನಾನಲ್ಲ. ನಾನು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧನಾಗಿರುವವನು ಎಂದು ಮಹದೇವಪ್ಪ ಹೇಳಿದ್ದಾರೆ. 
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಹದೇವಪ್ಪ ಅವರು ಟಿ.ನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್ ಎದುರು ಹೀನಾಯ ಸೋಲು ಕಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT