ವಿಧಾನಸಭೆ 
ರಾಜಕೀಯ

ಬಜೆಟ್ ಅಧಿವೇಶನಕ್ಕೆ ತೆರೆ, ಮುಂದಿನ ಅಧಿವೇಶನ ಬೆಳಗಾವಿಗೆ ಶಿಫ್ಟ್

11 ದಿನಗಳ ಬಜೆಟ್ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ...

ಬೆಂಗಳೂರು: 11 ದಿನಗಳ ಬಜೆಟ್ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅವರು ಜುಲೈ 5ರಂದು ಮಂಡಿಸಿದ್ದ 2018-19ನೇ ಸಾಲಿನ ಬಜೆಟ್ ಗೆ ಅಂಗೀಕಾರ, ರೈತರ ಸಾಲ ಮನ್ನಾ ಮೊತ್ತವನ್ನು 40 ಸಾವಿರ ಕೋಟಿ ರುಪಾಯಿಗೆ ಏರಿಕೆ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಅಧಿವೇಶನದಲ್ಲಿ ತೆಗೆದುಕೊಳ್ಳಲಾಗಿದೆ.
ನಿನ್ನೆ ಬಿಜೆಪಿ ಸಭಾತ್ಯಾಗದ ಮಧ್ಯೆಯೇ ಕರ್ನಾಟಕ ಧನವಿನಿಯೋಗ ವಿಧೇಯಕ, ಮೋಟಾರು ವಾಹನಗಳ ತೆರಿಗೆ ವಿಧೇಯಕ, ಕರ್ನಾಟಕ ಮೌಲ್ಯವರ್ಧಿತ ತೆರಿಗೆ ವಿಧೇಯಕ ಹಾಗೂ ಕರ್ನಾಟಕ ವಿದ್ಯುಚ್ಛಕ್ತಿ ವಿಧೇಯಕಗಳಿಗೆ ವಿಧಾನಸಭೆ ಅಂಗೀಕಾರ ನೀಡಿತ್ತು.
ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ವಿಧಾನಸಭೆ ಕಾಲಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದ್ದು, ಮುಂದಿನ ಅಧಿವೇಶನ ನವೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಕಲಾಪಕ್ಕೆ ನಿನ್ನೆಯೇ ತೆರೆ ಬಿದ್ದಿದ್ದು, ಮುಂದಿನ ತಿಂಗಳು ನಿವೃತ್ತಿ ಹೊಂದಲಿರುವ ಬಿಜೆಪಿಯ ಕೆ ಬಿ ಶಾಣಪ್ಪ ಮತ್ತು ತಾರಾ ಅನುರಾಧ ಅವರಿಗೆ ಆತ್ಮೀಯವಾಗಿ ಬಿಳ್ಕೋಡಲಾಯಿತು.
ಪರಿಷತ್ ಸಭಾನಾಯಕಿ ಜಯಮಾಲಾ ಹಾಗೂ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಕೆಬಿ ಶಾಣಪ್ಪ ಮತ್ತು ತಾರಾ ಅನುರಾಧ ಅವರು ಮಾದರಿ ಪರಿಷತ್ ಸದಸ್ಯರಾಗಿದ್ದರು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!