ಸಂಗ್ರಹ ಚಿತ್ರ 
ರಾಜಕೀಯ

ಸಿಎಂ ಕುಮಾರಸ್ವಾಮಿ ಅತ್ಯುತ್ತಮ ನಟ, ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಅತ್ಯುತ್ತಮ ನಟರಾಗಿದ್ದು, ತಮ್ಮ ಅಪರೂಪದ ಕೌಶಲ್ಯಗಳಿಂದ ಜನರನ್ನು ಮೂರ್ಖರನ್ನಾಗಿಸುತ್ತಲೇ ಇರುತ್ತಾರೆಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ...

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಅತ್ಯುತ್ತಮ ನಟರಾಗಿದ್ದು, ತಮ್ಮ ಅಪರೂಪದ ಕೌಶಲ್ಯಗಳಿಂದ ಜನರನ್ನು ಮೂರ್ಖರನ್ನಾಗಿಸುತ್ತಲೇ ಇರುತ್ತಾರೆಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. 
ಜೆಡಿಎಸ್ ಕಾರ್ಯಕ್ರಮವೊಂದರಲ್ಲಿ ಕುಮಾರಸ್ವಾಮಿಯವರು ಭಾವೋದ್ವೇಗದಿಂದ ಮಾತನಾಡಿರುವ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಬಿಜೆಪಿ ವ್ಯಂಗ್ಯವಾಡಿದೆ. 
ನಮ್ಮ ದೇಶ ಅನೇಕ ಪ್ರತಿಭಾವಂತ ನಟರನ್ನು ಕೊಟ್ಟಿದೆ. ಆ ನಟರು ತಮ್ಮ ಅದ್ಭುತ ನಟನೆಯಿಂದ ಪ್ರೇಕ್ಷಕರನ್ನು ವಿಸ್ಮಯರನ್ನಾಗಿ ಮಾಡಿದ್ದಾರೆ. ಇಲ್ಲಿ ಕುಮಾರಸ್ವಾಮಿ ಅವರು ಮತ್ತೊಬ್ಬ ಮೇರುನಟರಾಗಿದ್ದು, ಸತತವಾಗಿ ಜನಸಾಮಾನ್ಯರನ್ನು ಮೂರ್ಖರನ್ನಾಗಿಸುತ್ತಲೇ ಇದ್ದಾರೆಂದು ಟ್ವಿಟರ್ ನಲ್ಲಿ ತಿಳಿಸಿದೆ. 
ಜೆಪಿ ಭವನದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ನೂತನ ಸಚಿವರು ಮತ್ತು ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುಮಾರಸ್ವಾಮಿಯವರು ತೀವ್ರ ಭಾವೋದ್ವೇಗಕ್ಕೆ ಒಳಗಾಗಿದ್ದರು.
ರಾಜ್ಯ ಸಮ್ಮಿಶ್ರ ಸರ್ಕಾರ ಮುಖ್ಯಮಂತ್ರಿಯಾಗಿರುವುದಕ್ಕೆ ಕಾರ್ಯಕರ್ತರಿಗೆ ಸಂತೋಷವಾಗಿದೆ. ಆದರೆ, ನಾನು ಸಂತೋಷದಲ್ಲಿಲ್ಲ. ನೋವಿನ ವಿಷ ನುಂಗುತ್ತಿರುವ ನಾನು ವಿಷಕಂಠನಾಗಿದ್ದು, ನಿಮಗೆ ಅಮೃತ ನೀಡುವ ಪ್ರಯತ್ನಗಳನ್ನು ಮಾಡುತ್ತಿದ್ದೇನೆಂದು ಕುಮಾರಸ್ವಾಮಿಯವರು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT