ಸಿದ್ದರಾಮಯ್ಯ 
ರಾಜಕೀಯ

ಕುಮಾರಸ್ವಾಮಿ ಮೇಲೆ ಒತ್ತಡ ಇಲ್ಲ, ಕಣ್ಣೀರಿಗೆ ಕಾರಣ ಅವರೇ ಸ್ಪಷ್ಟಪಡಿಸಿದ್ದಾರೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಧಿಕಾರ ನಡೆಸಲು ಯಾವುದೇ ಒತ್ತಡ ಇಲ್ಲ. ತಮ್ಮಕಣ್ಣೀರಿಗೆ...

ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಧಿಕಾರ ನಡೆಸಲು ಯಾವುದೇ ಒತ್ತಡ ಇಲ್ಲ. ತಮ್ಮಕಣ್ಣೀರಿಗೆ ಕಾರಣವನ್ನು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ವಿಷೇಶ ಸ್ಥಾನಮಾನ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ನೀಡಲಾಗಿದೆ ಎಂದರು.
ನಂಜುಂಡಪ್ಪ ವರದಿ ಅನುಸಾರ ಉತ್ತರ ಕರ್ನಾಟಕಕ್ಕೆ 3 ಸಾವಿರ ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವ ಪ್ರಸ್ತಾಪವೇ ಬರಬಾರದು ಎಂದರು.
ಇದೇ ವೇಳೆ ಶೀಘ್ರ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆಗಲಿದೆ ಎಂದು ಮಾಜಿ ಸಿಎಂ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!