ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಅಪಸ್ವರ: ಹೈಕಮಾಂಡ್ ಗೆ ಬಿಸಿತುಪ್ಪವಾದ ಹಳೇ ಮಸೂರು

Shilpa D
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಎರಡು ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು 
ಸಮ್ಮತಿಸಿದ್ದಾರೆ, ಆದರೆ ಸೆಪ್ಟಂಬರ್ ತಿಂಗಳಲ್ಲಿ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಎರಜು ಪಕ್ಷಗಳಲ್ಲಿ ಅಪಸ್ವರ ಕೇಳಿ ಬರುತ್ತಿದೆ.
ಸೆಪ್ಟಂಬರ್ ತಿಂದಗಳ ಮೊದಲ  ವಾರದಲ್ಲಿ 108 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ದತೆ ನಡೆಸಿದೆ. ಜೆಡಿಎಸ್ ಜತೆಗೆ ಚುನಾವಣೆಗೆ ಹೋದರೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಕಾಂಗ್ರೆಸ್‌ ನಾಯಕರ ಅಭಿಪ್ರಾಯ ಪಟ್ಟಿದ್ದಾರೆ.
ಮೈತ್ರಿ ಅಸಾಧ್ಯ, ಹಳೇಯ ಮೈಸೂರು ಭಾಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡು ಪ್ರಬಲವಾಗಿವೆ, ಸ್ಥಳೀಯ ವಿಷಯಗಳು, ವಯಕ್ತಿಕ ದ್ವೇಷ,  ಜಾತಿ ಸಮೀಕರಣ ಮತ್ತು ಸಮುದಾಯದ ನಿರ್ಧಾರ ಸ್ಥಳೀಯ ಸಂಸ್ಥೆ ಚುನಾವಣೆ ಭವಿಷ್ಯ ನಿರ್ಧರಿಸುತ್ತವೆ, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಎರಡು ಪತ್ರಗಳ ನಾಯಕರು ರಾಜ್ಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ, ಆದರೆ ತಳಮಟ್ಟದಲ್ಲಿ ಈ ಮೈತ್ರಿಗೆ ಎಲ್ಲೆಡೆ ಬದ್ದ ವಿರೋಧ ವ್ಯಕ್ತ ವಾಗಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ, ಸ್ಥಳೀಯ ಸಂಸ್ಥೆ ಚುನಾವಣೆ ರಾಜಕೀಯ ಲಾಭಕ್ಕಿಂತ ವಯಕ್ತಿಕ ಪ್ರತಿಷ್ಠೆಯ ವಿಷಯವಾಗಿದೆ,
ಬಲವಂತವಾಗಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡರೇ ಗಳಿಸುವುದಕ್ಕಿಂತ ಹೆಚ್ಚು ಕಳೆದುಕೊಳ್ಳಬೇಕಾಗುತ್ತದೆ, ಆಗ ಬಿಜೆಪಿಗೆ ಅದು ಪ್ಲಸ್ ಪಾಯಿಂಟ್ ಆಗುತ್ತದೆ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ನಿಧಾನವಾಗಿ ಪ್ರಾಬಲ್ಯ ಸ್ಥಾಪಿಸುತ್ತಿದೆ. ನಮ್ಮ ಕಾರ್ಯಕರ್ತರು ಮೈತ್ರಿ ಮಾಡಿಕೊಳ್ಳುವುದಿಲ್ಲ, ಬದಲಿಗೆ ಪಕ್ಷಕ್ಕೆ ರಾಜಿನಾಮೆ ಕೊಟ್ಟು,  ಬೇರೆ ಪಕ್ಷ ಸೇರಿ, ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಜೊತೆ ಶನಿವಾರ ಎಲ್ಲಾ ಜಿಲ್ಲಾ ಕಾಂಗ್ರೆಸ್ ಮುಖಂಡರ ಜೊತೆ  ಸಭೆ ಏರ್ಪಡಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕೂಡ ಹಾಜರಿರಲಿದ್ದಾರೆ, 
ಸರ್ಕಾರ ರಚಿಸಲು ಜೆಡಿಎಸ್ ಜೊತೆ ಕೈ ಜೋಡಿಸಿದ್ದೇವೆ, ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಫರ್ಧಿಸುತ್ತೇವೆ, ಆದರೆ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ,
ಇನ್ನೂ ಜೆಡಿಎಸ್ ಕೂಡ ಇದೇ ಮನಸ್ಥಿತಿಯಲ್ಲಿದೆ, ತಮ್ಮ ಜಿಲ್ಲಾ ಮುಖಂಡರು ಅಭಿಪ್ರಾಯ ಪಡೆದು ನಂತರ ನಿರ್ಧಾರ ಪ್ರಕಟಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಹೇಳಿದ್ದಾರೆ, 
ರಾಷ್ಟ್ರ ಮಟ್ಟದ ಲೆಕ್ಕಾಚಾರ ಹಾಕುವ ಭರದಲ್ಲಿ ಕಾಂಗ್ರೆಸ್‌ ತನ್ನ ಬೇರುಗಳನ್ನು ತಾನೇ ಸಡಿಲು ಮಾಡಿಕೊಳ್ಳುತ್ತಿದ್ದು, ಈ ಮೂಲಕ ಜೆಡಿಎಸ್‌ ಶಕ್ತಿ ವಪರೋಕ್ಷವಾಗಿ ಕಾರಣವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
SCROLL FOR NEXT