ಸಿದ್ದರಾಮಯ್ಯ-ಕುಮಾರಸ್ವಾಮಿ 
ರಾಜಕೀಯ

ಶೀಘ್ರದಲ್ಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನ: ಕಾಂಗ್ರೆಸ್ ನಾಯಕ

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಕಾಂಗ್ರೆಸ್ ನಾಯಕ ಕೆಎನ್ ರಾಜಣ್ಣ ಭವಿಷ್ಯ ನುಡಿದ್ದಾರೆ...

ತುಮಕೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಕಾಂಗ್ರೆಸ್ ನಾಯಕ ಕೆಎನ್ ರಾಜಣ್ಣ ಭವಿಷ್ಯ ನುಡಿದ್ದಾರೆ. 
ಮೈತ್ರಿ ಸರ್ಕಾರದ ಕಾರ್ಯವೈಖರಿ ನೋಡಿದರೆ ಇದಕ್ಕೆ ಆಯುಷ್ಯ ಕಡಿಮೆ ಎನಿಸುತ್ತದೆ. ಇನ್ನು ವಿನಃ ಕಾರಣ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಬೇರೆ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುತ್ತಾರೆ. ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರು ಹೆಣ್ಣುಮಕ್ಕಳಂತೆ ಅಳುತ್ತಾರೆ. ಈ ವಿಷಯ ಸಂಸತ್ತಿನಲ್ಲೂ ಚರ್ಚೆ ಆಗುತ್ತಿದೆ ಎಂದರು. 
ರಾಜ್ಯವನ್ನಾಳುವವರೆ ಅಳುತಾ ಜನತೆಗೆ ಅಪಮಾನ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಈ ನಡೆಯಿಂದ ಕಾಂಗ್ರೆಸ್ ಇಮೇಜ್ ಗೆ ಧಕ್ಕೆ ಆಗಿದೆ. ಚುನಾವಣೆ ವೇಳೆ ಮತಕ್ಕಾಗಿ ಅಳುವುದನ್ನು ನೋಡಿದ್ದೇವೆ. ಆದರೆ ಈಗ ಅಳುವುದು ಸರಿಯಲ್ಲ ಎಂದು ಹೇಳಿದ್ದಾರೆ. 
2019ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ತುಮಕೂರು ಕ್ಷೇತ್ರದ ಹಾಲಿ ಪಕ್ಷದ ಸಂಸದರಿದ್ದಾರೆ. ಹೀಗಾಗಿ ಕ್ಷೇತ್ರ ಬಿಟ್ಟುಕೊಡಬಾರದು. ಒಂದು ವೇಳೆ ಜೆಡಿಎಸ್ ಗೆ ಬಿಟ್ಟು ಕೊಟ್ಟರೆ ಕಣಕ್ಕಿಳಿಯುವುದು ಗ್ಯಾರಂಟಿ. ಇಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video