ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಲು ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಹುಲ್ ಗಾಂಧಿ ನಾಯಕತ್ವಕ್ಕೆ ನಮ್ಮ ತಕರಾರಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ..
ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವಿದೆ, ಹಾಗೆಯೇ ಮುಂದಿನ ಲೋಕಸಭೆ ಚುನಾವಣೆಯಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ, ಮೈತ್ರಿ ಕೂಟದ ನಾಯಕರು ಯಾವ ಪಕ್ಷ ಯಾವ ರಾಜ್ಯದಲ್ಲಿ ಎಷ್ಟು ಸಂಖ್ಯೆಯಲ್ಲಿ ಸ್ಥಾನ ಹಂಚಿಕೊಳ್ಳಬೇಕು ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದ್ದಾರೆ.