ಬೆಂಗಳೂರು: ರೈತರ ಸಾಲಮನ್ನಾ ಮಾಡುವಂತ ಒತ್ತಾಯಿಸಿ ಬಿಜೆಪಿ ಕೈಗೊಂಡಿರುವ ಪಾದಯಾತ್ರೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಎಂ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆ ಪತ್ರ ಬಿಜೆಪಿಯವರು ರೈತರಿಗಾಗಿ ಹೋರಾಟ ನಡೆಸುತ್ತಿದ್ದಾರಲ್ಲ ಎಂದ ಕುಮಾರ ಸ್ವಾಮಿ, ನಾನು ರೈತರ ಸಾಲ ಮನ್ನಾ ಮಾಡುತ್ತಿದ್ದೇನೆ, ಬಿಜೆಪಿಯವರು ಇದಕ್ಕಾಗಿ ನನ್ನನ್ನು ಮೆಚ್ಚಬೇಕು ಎಂದು ಹೇಳಿದ್ದಾರೆ.
ರಾಜ್ಯ ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದ್ದು, ಇಂದಿನಿಂದ ಇದಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತವರು ಜಿಲ್ಲೆ ರಾಮನಗರದಿಂದ ಬೆಂಗಳೂರಿನವರೆಗೆ ಜು 27ರಿಂದ 28ರವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ.