ರಾಜಕೀಯ

ಲೋಕಸಭಾ ಚುನಾವಣೆ: ಶೀಘ್ರದಲ್ಲಿಯೇ ಬಿಜೆಪಿ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

Nagaraja AB

ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯನ್ನು ಸದೆಬಡಿಯುವ ನಿಟ್ಟಿನಲ್ಲಿ ಬಿಜೆಪಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದ್ದು,  ರಾಜ್ಯದ ಎಲ್ಲಾ ಲೋಕಸಭಾ  ಕ್ಷೇತ್ರಗಳಲ್ಲೂ  ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತಿದೆ.

ಲೋಕಸಭಾ ಚುನಾವಣೆ ಸಿದ್ಧತೆಗಾಗಿ ಜುಲೈ 30 ರಿಂದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗುವುದು,ಲೋಕಸಭಾ ಚುನಾವಣೆ  ಸಿದ್ಧತೆ ಅವರ ಜವಾಬ್ದಾರಿಯಾಗಿರುತ್ತದೆ. ನೇಮಕವಾದ ನಂತರ ಅವರು ಕಾರ್ಯಾರಂಭಿಸಬೇಕು ಎಂದು ಬಿಜೆಪಿಯ ಹಿರಿಯ ಮುಖಂಡರು ತಿಳಿಸಿದ್ದಾರೆ.

ಈ ನಾಯಕರು ಪಕ್ಷದ ಹೈಕಮಾಂಡ್  ನಿರ್ದೇಶನದಂತೆ   ಕ್ಷೇತ್ರದ ಕಾರ್ಯಕರ್ತರೊಂದಿಗೆ  ಸಮನ್ವಯ ಸಾಧಿಸಬೇಕು. ಕಾಂಗ್ರೆಸ್ , ಜೆಡಿಎಸ್ ಮೈತ್ರಿಯಾದರೂ  ಕಾಂಗ್ರೆಸ್ ವಿರೋಧಿ ಮತಗಳು ಚದುರುವುದಿಲ್ಲ. ಇದು ಪಕ್ಷಕ್ಕೆ ಲಾಭವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 ಪ್ರಧಾನಿ ನರೇಂದ್ರಮೋದಿ ಸಮಾವೇಶ ಮುಂದೂಡಿಕೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಬೆಳಗಾವಿ ಜಿಲ್ಲೆಯ ಚಿಕ್ಕೊಡಿಯಲ್ಲಿ ಜುಲೈ 29 ರಂದು ನಡೆಸಲು ಉದ್ದೇಶಿಸಿದ್ದ ಮೋದಿ ಸಮಾವೇಶವನ್ನು ಮುಂದೂಡಲಾಗಿದೆ. ಶೀಘ್ರದಲ್ಲಿ ನೂತನ ದಿನಾಂಕವನ್ನು ನಿರ್ಧಾರಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ತಿಳಿಸಿದ್ದಾರೆ.

ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ರಾಮನಗರಿಂದ ಬೆಂಗಳೂರಿನವರೆಗೂ ಮೂರುದಿನಗಳ ಪಾದಯಾತ್ರೆ ಹಮ್ಮಿಕೊಂಡಿದೆ. ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮಾಜಿ ಶಾಸಕ ಸಿ. ಪಿ. ಯೋಗೇಶ್ವರ್, ಮತ್ತಿತರ ಹಲವು ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

SCROLL FOR NEXT