ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಸಿಎಂ ಉತ್ತರ ಕರ್ನಾಟಕ ಹೇಳಿಕೆಯಿಂದ ಕಾಂಗ್ರೆಸ್ ನಾಯಕರ ಕಣ್ಣು ಕೆಂಪು: ಮತ್ತೊಂದು ವಿವಾದಕ್ಕೆ ನಾಂದಿ?

ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿಪಕ್ಷಗಳ ನಡುವೆ ಹೊಸದೊಂದು ಭಿನ್ನಾಭಿಪ್ರಾಯ ಹುಟ್ಟಿಕೊಳ್ಳುವ ...

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿಪಕ್ಷಗಳ ನಡುವೆ ಹೊಸದೊಂದು ಭಿನ್ನಾಭಿಪ್ರಾಯ ಹುಟ್ಟಿಕೊಳ್ಳುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ಬಗ್ಗೆ ನೀಡಿರುವ ಹೇಳಿಕೆ ಕಾಂಗ್ರೆಸ್ ನಾಯಕರನ್ನು ತೀವ್ರ ಒತ್ತಡದಲ್ಲಿ ಮತ್ತು ಮುಜುಗರಕ್ಕೀಡುಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಆಗಸ್ಟ್ 2ರಂದು 16 ಜಿಲ್ಲೆಗಳಲ್ಲಿ ಕರೆ ನೀಡಲಾಗಿರುವ ಬಂದ್ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆ ಮತ್ತು ವಿವಾದಗಳಿಗೆ ಕಾರಣವಾಗಿದೆ.
ಕುಮಾರಸ್ವಾಮಿಯವರು ಆಡಿರುವ ಮಾತಿಗೆ ಬೇಸರ ವ್ಯಕ್ತಪಡಿಸಿ ಈಗಾಗಲೇ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ಮತ್ತು ಹಿರಿಯ ನಾಯಕರು ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಹೇಳಿಕೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ಹೊಡೆತ ಬೀಳುವ ಸಾಧ್ಯತೆಯಿರುವುದರಿಂದ ಮುಂದಿನ ವರ್ಷದ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಈ ವಿಷಯವನ್ನು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಮತ ಹಾಕುವಾಗ ಜನರು ತಮ್ಮ ಜಾತಿ ಮತ್ತು ಹಣ ಲೆಕ್ಕಾಚಾರ ಹಾಕುತ್ತಾರೆ. ಈಗ ನಾನು ಕೆಲಸ ಮಾಡಬೇಕೆಂದು ಹೇಳುತ್ತಾರೆ ಎಂದು ಮೊನ್ನೆ ಚೆನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊಪ್ಪಳದಲ್ಲಿ ರೈತರು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಕುರಿತು ಹೇಳಿದ್ದರು.

ಮುಖ್ಯಮಂತ್ರಿಯವರ ಈ ಹೇಳಿಕೆ ಉತ್ತರ ಕರ್ನಾಟಕ ಭಾಗದ ರೈತರನ್ನು ಕೆರಳಿಸಿದೆ. ಮುಖ್ಯಮಂತ್ರಿಯವರು ಈ ರೀತಿ ಹೇಳಿಕೆ ನೀಡುತ್ತಿರುವುದು ಇದು ಮೊದಲ ಸಲವೇನಲ್ಲ. ''ನನ್ನ ಜನರು ನನಗೆ ಮತ ಹಾಕಿ ಮುಖ್ಯಮಂತ್ರಿ ಆಗುವ ಅವಕಾಶ ಕರುಣಿಸಿದ್ದಾರೆ. ಹಾಗಿರುವಾಗ ಅವರಿಗೆ ಉಪಯೋಗವಾಗುವ ಕೆಲವು ಯೋಜನೆಗಳನ್ನು ನೀಡಬೇಡವೇ'' ಎಂದು ನಿಮ್ಮ ಬಜೆಟ್ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿದೆಯಲ್ಲವೇ ಎಂದು ಮಾಧ್ಯಮದ ಪ್ರತಿನಿಧಿಗಳು ಕೇಳಿದ್ದಾಗ ಈ ಹಿಂದೆ ಕುಮಾರಸ್ವಾಮಿ ಹೇಳಿದ್ದರು.

ಪ್ರತಿ ಬಾರಿಯೂ ಮುಖ್ಯಮಂತ್ರಿ ಈ ರೀತಿ ಮಾತನಾಡುತ್ತಾರೆ, ಉತ್ತರ ಕರ್ನಾಟಕದವರನ್ನು ಕೆರಳಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಆ ರೀತಿ ಹೇಳಿಕೆ ನೀಡಬಾರದು. ನಮ್ಮ ಪಕ್ಷ ಇಡೀ ಕರ್ನಾಟಕದ ಪರವಾಗಿದ್ದು ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ನೋಡುತ್ತದೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಬೇಕೆಂದು ಕೆಪಿಸಿಸಿಯ ಹಿರಿಯ ನಾಯಕರು ಹೇಳಿದ್ದಾರೆ.

ಆದರೆ ಸಂಸತ್ತಿನ ಮುಂಗಾರು ಅಧಿವೇಶನ ಮುಗಿಯದೆ ಕೆಪಿಸಿಸಿ ಸಮನ್ವಯ ಸಮಿತಿ ಸಭೆ ನಡೆಯುವುದು ಸಂಶಯ. ಏಕೆಂದರೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರ ಉಪಸ್ಥಿತಿ ಇರಬೇಕಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ನ ಪ್ರಾಬಲ್ಯ ಅತ್ಯಂತ ಕಡಿಮೆ. 16 ಜಿಲ್ಲೆಗಳಲ್ಲಿ ಅದರ ಅಸ್ತಿತ್ವವೇ ಇಲ್ಲ. ಆದರೆ ಕಾಂಗ್ರೆಸ್ ಮಾತ್ರ ಹಾಗಿಲ್ಲ, ಈ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬಿಜೆಪಿಯೊಂದಿಗೆ ಪ್ರಬಲ ಸ್ಪರ್ಧೆ ನಡೆಸುತ್ತಿದೆ. 2013ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆ ಕಾಂಗ್ರೆಸ್ ಶಾಸಕರನ್ನು ತೊಂದರೆಗೆ ಸಿಲುಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!