ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಬಿಜೆಪಿ ಕುಮ್ಮಕ್ಕು: ಡಿ.ಕೆ. ಶಿವಕುಮಾರ್
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ವೈದ್ಯಕೀಯ ಮತ್ತು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರು:ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ವೈದ್ಯಕೀಯ ಮತ್ತು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನುದಾನ ಹಂಚಿಕೆಯ ವಿಷಯದಲ್ಲಿ ತಾರತಮ್ಯ ಮಾಡಲಾಗಿದೆ ಎನ್ನುವ ನೆಪವೊಡ್ಡಿ ರಾಜ್ಯವನ್ನು ಇಬ್ಬಾಗ ಮಾಡುವಂತಹ ಕೃತ್ಯಕ್ಕೆ ಬಿಜೆಪಿ ಕೈ ಹಾಕಿದೆ. ಅದು ಎಂದಿಗೂ ಫಲಿಸುವುದಿಲ್ಲ ಎಂದು ಹೇಳಿದರು.
ಸಾಲಮನ್ನಾ ವಿಷಯವಾಗಿ ಬಿಜೆಪಿ ನಡೆಸಿರುವ ಪಾದಯಾತ್ರೆಯಲ್ಲಿ ಯಾವೊಬ್ಬ ಹಳ್ಳಿಗಾಡಿನ ರೈತರು ಇರಲಿಲ್ಲ. ಎಲ್ಲ ಬಿಜೆಪಿ ಕಾರ್ಯಕರ್ತರೆ, ಹಸಿರು ಶಾಲು ಹಾಕಿದಾಕ್ಷಣ ರೈತರಾಗಲು ಸಾಧ್ಯವಿಲ್ಲ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.