ಬೆಂಗಳೂರು; ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬೆನ್ನಿಗೆ ನಿಂತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಅವರೊಂದಿಗೆ ಕಾಂಗ್ರೆಸ್ ಪಕ್ಷವಿದೆ ಎಂದು ಶುಕ್ರವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಿಬಿಐ ದಾಳಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜಕೀಯ ದ್ವೇಷ ಸಾಧನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವ ಎನ್'ಡಿಎ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ ಎಂದು ಹೇಳಿದ್ದಾರೆ.