ಮಲ್ಲಿಕಾರ್ಜುನ ಖರ್ಗೆ-ಕೆಸಿ ವೇಣುಗೋಪಾಲ್-ರಾಹುಲ್ ಗಾಂಧಿ 
ರಾಜಕೀಯ

'ಹೆಚ್‏ಡಿಕೆ 5 ವರ್ಷ ಸಿಎಂ' ಘೋಷಣೆಗೆ ಖರ್ಗೆ ಸೇರಿ ಹಿರಿಯ ಕಾಂಗ್ರೆಸ್ ಮುಖಂಡರಿಂದ ಅಸಮಾಧಾನ!

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿರುವುದಕ್ಕೆ...

ನವದೆಹಲಿ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿರುವುದಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ಮೈತ್ರಿ ಸರ್ಕಾರದ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕೆಸಿ ವೇಣುಗೋಪಾಲ್ ಅವರು ಈ ವೇಳೆ ಮುಂದಿನ ಐದು ವರ್ಷಗಳ ಕಾಲ ಹೆಚ್ ಡಿ ಕುಮಾರಸ್ವಾಮಿ ಅವರೇ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದರು. 
ಇದರಿಂದ ಕಾಂಗ್ರೆಸ್ ನ ಹಿರಿಯ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಕೆಸಿ ವೇಣುಗೋಪಾಲ್ ಅವರನ್ನು ಈ ಸಂಬಂಧ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. 
ಮೈತ್ರಿ ಸರ್ಕಾರ ಕುರಿತ ಒಪ್ಪಂದದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂಬುದರ ಕುರಿತು ಚರ್ಚಿಸಿರಲಿಲ್ಲ. ಆದರೆ ಇದೀಗ ನೀವು ಕುಮಾರಸ್ವಾಮಿ ಐದು ವರ್ಷದ ಸಿಎಂ ಎಂದು ಘೋಷಿಸಿದ್ದೀರಾ, ಜೆಡಿಎಸ್ ಗೆ ಹಣಕಾಸು ಖಾತೆ ಕೊಟ್ಟು ಅವರನ್ನು ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಸಬೇಕು ಎಂದು ಪ್ರಶ್ನಿಸಿದ್ದಾರೆ. 
ಚುನಾವಣೆಯಲ್ಲಿ ಕಾಂಗ್ರೆಸ್ 79 ಸ್ಥಾನಗಳನ್ನು ಪಡೆದಿದ್ದು ಕೇವಲ 37 ಸ್ಥಾನಗಳನ್ನು ಪಡೆದಿದರುವ ಜೆಡಿಎಸ್ ಗೆ ಹಣಕಾಸು ಖಾತೆ ಮತ್ತು ಸಿಎಂ ಸ್ಥಾನ ಎರಡನ್ನು ಬಿಟ್ಟುಕೊಟ್ಟರೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಕಟ್ಟುವುದು ಹೇಗೆ? ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ನ ಪರಿಸ್ಥಿತಿ ಏನಾಗುವುದೋ ಗೊತ್ತಿಲ್ಲ ಎಂದು ವೇಣುಗೋಪಾಲ್ ಅವರನ್ನು ಕೇಳಿದ್ದಾರೆ ಎನ್ನಲಾಗಿದೆ. 
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಕುರಿತಂತೆ ನಿನ್ನೆಯ ಒಪ್ಪಂದದ ಕುರಿತಂತೆ ಹೈಕಮಾಂಡ್ ಸಮ್ಮತಿಯನ್ನು ಪಡೆಯುವ ಸಲುವಾಗಿ ವೇಣುಗೋಪಾಲ್ ಅವರು ದೆಹಲಿಗೆ ತೆರಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ