ಮೈಸೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗ, ಕಾಂಗ್ರೆಸ್ ತನ್ನ ಪಕ್ಷದಿಂದ ಸಂಪುಟಕ್ಕೆ ಹೊಸ ಮುಖಗಳನ್ನು ಸೇರಿಸಿಕೊಳ್ಳಲು ತಯಾರಿ ನಡೆಸಿದ್ದು ಹಿರಿಯರನ್ನು ನಿರ್ಲಕ್ಷಿಸಿತ್ತು. ಆದರೆ ಸಂಪುಟದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಹಿರಿಯರಿಗೂ ಅವಕಾಶ ನೀಡುವಂತೆ ಒತ್ತಾಯಿಸಲಾಗುತ್ತಿದೆ.
ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಪಿ ಪ್ರಚಾರ ಸಮಿತಿ ಮುಖ್ಯಸ್ಥ ಡಿ.ಕೆ ಶಿವಕುಮಾರ್ ಹಾಗೂ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ವೇಣುಗೋಪಾಲ್ ಅವರುಗಳು ಈ ಸಂಬಂಧ ರಾಹುಲ್ ಗಾಂಧಿ ಜೊತೆ ಚರ್ಚಿಸಲಿದ್ದಾರೆ.
ಸಂಪುಟ ವಿಸ್ತರಣೆ ಸಂಬಂಧ ಸಚಿವರ ಪಟ್ಟಿಯನ್ನು ಇಂದು ಸಂಜೆ ದೆಹಲಿಗೆ ತೆಗೆದುಕೊಂಡು ಹೋಗುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಪಟ್ಟಿಯನ್ನು ಅಂತಿಮಗೊಳಿಸಿದ್ದು ಬುಧವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.
ಹಲವು ಹಿರಿಯ ಮುಖಂಡರು ಹಾಗೂ ಮಾಜಿ ಸಿವರು ತಮ್ಮ ಅಸಮಾಧಾನ ಹೊರ ಹಾಕಿದ್ದು, ರಾಹುಲ್ ಗಾಂಧಿಗೆ ತಮ್ಮ ಬೇಸರದ ಕುರಿತು ತಿಳಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ. ಒಂದುವ ವೇಳೆ ತಮನ್ನು ಕಡೆಗಣಿಸಿದರೇ ಲೋಕಸಭೆ ಚುನವಾಣೆಯಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸದ್ಯ ಸಮ್ಮಿಶ್ರ ಸರ್ಕಾರ ಸುಲಲಿತವಾಗಿ ನಡೆಯುತ್ತಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದವನರು ತಮಗೆ ಈ ಬಾರಿ ತಮಗೆ ಸಂಪುಟದಲ್ಲಿ ಸ್ಥಾನ ಸಿಗುವುದೆಂಬ ಭರವಸೆಯಲ್ಲಿದ್ದಾರೆ. ಹಿಂದಿನ ಸರ್ಕಾರಗ ಅವಧಿಯಲ್ಲಿ ಜಾರಿಗೆ ತಂದಿದ್ದ ಯೋಜನೆಗಳನ್ನು ಅನುಷ್ಛಾನಗೊಳಿಸಲು ತಮಗೆ ಅಧಿಕಾರ ನೀಡಬೇಕೆಂದು ಮಾಜಿ ಸಚಿವರುಗಳು ಮನವಿ ಮಾಡಿದ್ದಾರೆ, ಇಲ್ಲದಿದ್ದರೇ ದೇವೇಗೌಡ ಮತ್ತು ಕುಮಾರಸ್ವಾಮಿ ಎಲ್ಲಾ ಕ್ರೆಡಿಟ್ ತೆಗೆದುಕೊಳ್ಳುತ್ತಾರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಂದರೆಗೆ ಸಿಲುಕುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡು ಹೇಳಿದ್ದಾರೆ.
ಹಿರಿಯ ಸಚಿವರು ಸಂಪುಟದಲ್ಲಿದ್ದರೇ ವಿರೋಧ ಪಕ್ಷವನ್ನು ಸೂಕ್ತವಾಗಿ ನಿಬಾಯಿಸಬಹುದು,
ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಬಹುದು, ಎಲ್ಲಾ ಉತ್ತಮ ಕೆಲಸಗಳ ಕ್ರೆಡಿಟ್ ಜೆಡಿಎಸ್ ಪಾಲಾಗುವುದನ್ನು ತಪ್ಪಿಸಬಹುದು, ಸಿದ್ದರಾಮಯ್ಯ ಸರ್ಕಾರದ ಜನಪರ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ. ತಮ್ಮ ಉಪಸ್ಥಿತಿ ಇಲ್ಲದಿದ್ದರೇ ಲೋಕಸಭೆ ಚುನಾವಣೆ ವೇಳೆ ಹೆಚ್ಚಿನ ತೊಂದರೆಗೆ ಸಿಲುವಕುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos