ಮೈಸೂರು: ಧೈರ್ಯ ಇದ್ದರೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯನ್ನು ವಿಸರ್ಜಿಸಿ ಮತ್ತೆ ಚುನಾವಣೆ ಎದುರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಸವಾಲು ಹಾಕಿದ್ದಾರೆ.
ಬಹುಮತ ಪಡೆಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ. ಆದರೆ ಮೂರು ತಿಂಗಳಲ್ಲಿ ಮತ್ತೆ ಚುನಾವಣೆ ನಡೆದರೆ ಖಂಡಿತ 150 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಇದೇ ವೇಳೆ ಮೂರು ದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಪ್ರಯಾಣಕ್ಕೆ ಲಕ್ಷಗಟ್ಟಲೆ ವೆಚ್ಚ ಮಾಡಿದ್ದಾರೆ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಆ ವೆಚ್ಚವನ್ನು ನಾನೇ ಭರಿಸುತ್ತೇನೆ ಮತ್ತು ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಸಿಎಂ ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಮೂರು ದಿನ ಇದ್ದ ಮುಖ್ಯಮಂತ್ರಿ ಬಾಗಲಕೋಟೆ, ಇಳಕಲ್ ಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ವೆಚ್ಚ ₹13.5 ಲಕ್ಷವನ್ನು ಸರ್ಕಾರವೇ ಭರಿಸುವಂತೆ ಕಡತ ಕಳುಹಿಸಿದ್ದರು. ಖಾಸಗಿ ಹೆಲಿಕಾಪ್ಟರ್ ಬಾಡಿಗೆ ಪಡೆದರೂ ₹5 ಲಕ್ಷದಲ್ಲಿ ಹೋಗಿ ಬರಬಹುದು. ಹೀಗಾಗಿ ಕಡತವನ್ನು ವಾಪಸ್ ಕಳುಹಿಸಿದ್ದೇನೆ ಎಂದು ನಿನ್ನೆ ಕುಮಾರಸ್ವಾಮಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics