ಬೆಂಗಳೂರು: ಹದಿನಾಲ್ಕು ದಿನಗಳ ತೀವ್ರ ಕಸರತ್ತಿನ ಬಳಿಕ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಚಿವ ಸಂಪುಟ ಬುಧವಾರ ವಿಸ್ತರಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ.
ಕಳೆದ ಒಂದು ತಿಂಗಳಿನಿಂದಲೂ ಮಾಜಿ ಸಚಿವ ಎಂಬಿ ಪಾಟೀಲ್ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ, 2ನೇ ಬಾರಿಗೆ ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಹೊಂದುತ್ತಾರೆ ಎಂಬ ಭರವಸೆಯಲ್ಲಿದ್ದರು.
ಆದರೆ ಒಂದು ತಿಂಗಳ ನಂತರ ಪಾಟೀಲ್ ನಿರೀಕ್ಷೆಗಳೆಲ್ಲಾ ಉಲ್ಟಾ ಹೊಡೆದಿವೆ. ಎಂಬಿ ಪಾಟೀಲ್ ಗೆ ಯಾವುದೇ ಹುದ್ದೆ ನೀಡದಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ.ಹೀಗಾಗಿ ಅವರ ಬೆಂಬಲಿಗರು ಬೆಂಗಳೂರಿನ ಸದಾಶಿವನಗರ ಮನೆಯ ಮುಂಭಾಗ ಧರಣಿ ಕುಳಿತ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿಧಾನಸಭೆ ಚುನಾವಣೆ ವೇಳೆ ಎಂ ಬಿ ಪಾಟೀಲ್ ಪರ ಮಾತ್ರ ಪ್ರಚಾರ ನಡೆಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ತಾವು ಯಾವುದೇ ಮಂತ್ರಿ ಸ್ಥಾನ ಪಡೆಯದಿರಲು ನಿರ್ಧರಿಸಿದ್ದು, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಮನ ನೀಡುವುದಾಗಿ ತಿಳಿಸಿದ್ದಾರೆ.
ಎಲ್ಲಕ್ಕಿಂತ ಹೆಚ್ಚಾಗಿ ನಾನು ಕಳೆದ ಐದು ವರ್ಷಗಳಿಂದ ದಣಿದಿದ್ದೇನೆ, ಒಬ್ಬ ಸಚಿವನಾಗಿ ನನ್ನ ಕರ್ತವ್ಯಗಳನ್ನು ನಿರ್ವಹಿಸಲು ಕಠಿಣ ಕೆಲಸ ಮಾಡಿದ್ದೇನೆ, ಮುಂದಿನ ಐದು ವರ್ಷಗಳು ನಾನು ವಿಶ್ರಾಂತಿ ಪಡೆಯುತ್ತೇನೆ, ನನ್ನ ಆರೋಗ್ಯದ ಕಡೆ ಗಮನ ಹರಿಸುತ್ತೇನೆ. ಜೊತೆಗೆ ನನ್ನ ಕುಟುಂಬ ಹಾಗೂ ನನ್ನ ಸಂಸ್ಥೆಗಳ ಕಡೆಗೂ ನಿಗಾ ವಹಿಸುತ್ತೇನೆ ಎಂದು ಹೇಳಿದ್ದಾರೆ,
ಇನ್ನೂ ಪಾಟೀಲ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೆ ನೀಡಿದ್ದ. ಆದರೆ ನಂತರ ಅವನ ಜೊತೆ ಮಾತನಾಡಿ ಸಮಾಧಾನ ಪಡಿಸಿದ್ದಾಗಿ ಹೇಳಿದ್ದಾರೆ.
ಹೈಕಮಾಂಡ್ ನಿರ್ಧಾರಕ್ಕೆ ನನಗೆ ಬೇಸರವಿಲ್ಲ, ಆದರೆ ನನ್ನೆ ಕೆಲವು ಬೆಂಬಲಿಗರಿಗೆ ತುಂಬಾ ನೋವಾಗಿದೆ ಎಂದು ಹೇಳಿದರು, ಇನ್ನೂ ಸಚಿವ ಸ್ಥಾನ ಸಿಗಿದಿದ್ದಕ್ಕೆ ಶಾಸಕ ಸ್ಥಾವಕ್ಕೆ ರಾಜಿನಾಮೆ ನೀಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ ನಂತರ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ. ಬಬಲೇಶ್ವರ ಕ್ಷೇತ್ರದಿಂದ ಸ್ಪರ್ದಿಸಿದ್ದ ಪಾಟೀಲ್, 29,700 ಮತಗಳಿಂದ ಜಯಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics