ಬಸವರಾಜ್ ಹೊರಟ್ಟಿ-ಎಂ ಬಿ ಪಾಟೀಲ್ 
ರಾಜಕೀಯ

ಲಿಂಗಾಯತ ಧರ್ಮದ ವಿಚಾರದಲ್ಲಿ ಹೋರಾಟ ನಡೆಸಿದವರಿಗೆ ಸಿಗಲಿಲ್ಲ 'ಮಂತ್ರಿ' ಭಾಗ್ಯ

ಲಿಂಗಾಯತರಿಗೆ ಅಲ್ಪಸಂಖ್ಯಾತ ಧಾರ್ಮಿಕ ಸ್ಥಾನಮಾನ ಬಯಸಿದ್ದ ಮತ್ತು ಈ ನಿರ್ಧಾರಕ್ಕೆ ವಿರೋಧ ...

ಬೆಂಗಳೂರು: ಲಿಂಗಾಯತರಿಗೆ ಅಲ್ಪಸಂಖ್ಯಾತ ಧಾರ್ಮಿಕ ಸ್ಥಾನಮಾನ ಬಯಸಿದ್ದ ಮತ್ತು ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ವೀರಶೈವ ಹಾಗೂ ಲಿಂಗಾಯತ ಸಮುದಾಯದ ಯಾವುದೇ ರಾಜಕೀಯ ಮುಖಂಡರಿಗೆ ಈ ಬಾರಿಯ ಸರ್ಕಾರದಲ್ಲಿ ಸಚಿವ ಸ್ಥಾನ ಲಭಿಸಿಲ್ಲ.
ನಿನ್ನೆ ರಚನೆಯಾದ 25 ಸಚಿವರ ಪೈಕಿ ಲಿಂಗಾಯತ ಸಮುದಾಯದವರು ಏಳು ಮಂದಿ ಮಾತ್ರ. ತಲಾ ಇಬ್ಬರು ಕಾಂಗ್ರೆಸ್ ಮತ್ತು ಜೆಡಿಎಸ್ ನವರಾಗಿದ್ದಾರೆ.

ಮಾಜಿ ಸಚಿವರಾದ ಎಂ ಬಿ ಪಾಟೀಲ್, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಲಿಂಗಾಯತ ಧರ್ಮಕ್ಕೆ ಸಂಬಂಧಪಟ್ಟ ಹೋರಾಟ, ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದರು. ಆದರೆ ಸಚಿವರಾಗುವ ಅದೃಷ್ಟ ಸಿಗಲಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ಸ್ಥಾನಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮಾಜಿ ಸಚಿವರುಗಳಾದ ಶಾಮನೂರು ಶಿವಶಂಕರಪ್ಪ ಮತ್ತು ಈಶ್ವರ ಖಂಡ್ರೆ ಅವರನ್ನು ಸಹ ಸಂಪುಟಕ್ಕೆ ಸೇರಿಸಿಲ್ಲ. ಶಾಮನೂರು ಶಿವಶಂಕರಪ್ಪನವರು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದರೆ ಈಶ್ವರ ಖಂಡ್ರೆ ಪ್ರಧಾನ ಕಾರ್ಯದರ್ಶಿ ಬೇರೆ. ಇಬ್ಬರೂ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು.

ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ ಬಿಜೆಪಿಯಿಂದ ಲಿಂಗಾಯತ ಮತಗಳನ್ನು ಸೆಳೆದುಕೊಳ್ಳುವುದು ಕಾಂಗ್ರೆಸ್ ನ ಮತ್ತು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಉಪಾಯವಾಗಿತ್ತು. ಲಿಂಗಾಯತ ಸ್ಥಾನಮಾನಗಳನ್ನು ಮುಂದಿಟ್ಟುಕೊಂಡು ಹೋರಾಡಿದವರಲ್ಲಿ ಮೊನ್ನೆಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದು ಎಂ ಬಿ ಪಾಟೀಲ್ ಮಾತ್ರ. ವಿನಯ್ ಕುಲಕರ್ಣಿ, ಬಸವರಾಜ್ ರಾಯರೆಡ್ಡಿ ಮತ್ತು ಶರಣಪ್ರಕಾಶ್ ಪಾಟೀಲ್ ಚುನಾವಣೆಯಲ್ಲಿ ಸೋತಿದ್ದಾರೆ.

ಆದರೆ ಸಚಿವ ಸಂಪುಟ ರಚನೆಯಲ್ಲಿ ಲಿಂಗಾಯತ ಧರ್ಮದ ವಿಷಯ ಯಾವುದೇ ಕೆಲಸ ಮಾಡಿಲ್ಲ. ವಿಜಯಪುರದ ಶಾಸಕರು ಎಂ ಬಿ ಪಾಟೀಲ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದರೆ ಜೆಡಿಎಸ್ ನಲ್ಲಿ ವಿಧಾನಪರಿಷತ್ ಸದಸ್ಯರನ್ನು ಸೇರ್ಪಡೆ ಮಾಡಬಾರದು ಎಂಬುದು ಕಾರಣವಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಇನ್ನು ಕೂಡ ಖಾತೆ ಸಂಪೂರ್ಣವಾಗಿ ಹಂಚಿಕೆಯಾಗದಿರುವುದರಿಂದ ಮುಂದಿನ ದಿನಗಳಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದು ಎಂಬ ಆಶಾಭಾವನೆಯಲ್ಲಿದ್ದಾರೆ ಕೆಲವು ನಾಯಕರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT