ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಪ್ರಯಾಣ ವೆಚ್ಚದ ಹಣವನ್ನು ವಾಪಸ್ ಮಾಡಲು ಸಿದ್ಧ: ಬಿ ಎಸ್ ಯಡಿಯೂರಪ್ಪ

ಬಾಗಲಕೋಟೆ ಜಿಲ್ಲೆಯ ಇಳಕಲ್ ಮತ್ತು ಹಾವೇರಿಗೆ ಕಳೆದ ತಿಂಗಳು 21ರಂದು ಹೆಲಿಕಾಪ್ಟರ್ ನಲ್ಲಿ ...

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಇಳಕಲ್ ಮತ್ತು ಹಾವೇರಿಗೆ ಕಳೆದ ತಿಂಗಳು 21ರಂದು ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದ ತಮ್ಮ ನಿರ್ಧಾರವನ್ನು ಆಗಿನ ಉಸ್ತುವಾರಿ ಮುಖ್ಯಮಂತ್ರಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಖಾರವಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿರುವ ಅವರು, ಉಸ್ತುವಾರಿ ಮುಖ್ಯಮಂತ್ರಿಯಾಗಿ ಅಂದು ಡಾ.ಮಹಂತ್ ಶಿವಯೋಗಿ ಸ್ವಾಮಿಯವರಿಗೆ ಗೌರವ ನಮನ ಸಲ್ಲಿಸಲು ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದ್ದೆ. ಅದೇ ದಿನ ಹಾವೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಹೋಗಿದ್ದೆ ಎಂದು ಹೇಳಿದ್ದಾರೆ.

ಉಸ್ತುವಾರಿ ಮುಖ್ಯಮಂತ್ರಿಯಾಗಿ ಮತ್ತು ಜವಾಬ್ದಾರಿಯುತ ರಾಜಕಾರಣಿಯಾಗಿ ಅವರನ್ನು ಭೇಟಿ ಮಾಡುವುದು ನನ್ನ ಕರ್ತವ್ಯವಾಗಿತ್ತು. ಇದನ್ನು ನೀವು ಅನವಶ್ಯಕ ಖರ್ಚು ಎಂದು ಹೇಳಲು ಸಾಧ್ಯವೇ? ನಾನು ಪ್ರಯಾಣ ವೆಚ್ಚವನ್ನು ಹಿಂತಿರುಗಿಸಲು ಸಿದ್ಧನಿದ್ದೇನೆ. ರಾಜ್ಯದ ಮುಖ್ಯಮಂತ್ರಿಯಾಗಿ ಇದನ್ನು ಅನವಶ್ಯಕ ಖರ್ಚು ಎಂದು ಹೇಳಿ ರಾಜ್ಯದ ಜನತೆಯನ್ನು ತಪ್ಪುದಾರಿಗೆಳೆಯಲು ಸಾಧ್ಯವಿಲ್ಲ. ಅದರ ಬದಲು ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡುವುದರ ಬಗ್ಗೆ ಗಮನ ಕೊಡಿ ಎಂದು ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಅಧಿಕಾರ ವಹಿಸಿಕೊಂಡ ನಂತರ ತಾವು ಬೇರೆಯವರಂತೆ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿ ಅನಗತ್ಯ ಖರ್ಚು ಮಾಡುವುದಿಲ್ಲ. ಯಡಿಯೂರಪ್ಪನವರ ಬಾಗಲಕೋಟೆ ಮತ್ತು ಹಾವೇರಿ ಭೇಟಿಗೆ ರಾಜ್ಯ ಸರ್ಕಾರ 12 ಲಕ್ಷ ರೂಪಾಯಿ ವೆಚ್ಚ ಮಾಡಿದೆ ಎಂದು ಆರೋಪಿಸಿದ್ದರು.

ನಿನ್ನೆ ಯಡಿಯೂರಪ್ಪನವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ರಾಜ್ಯ ಹಣಕಾಸು ಬೊಕ್ಕಸ ಅಂತಹ ಹೀನಾಯ ಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ