ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಹೌದು, ಸ್ವಲ್ಪ ಬೇಸರ ಇದೆ: ಎಂಬಿ ಪಾಟೀಲ್ ಭೇಟಿ ನಂತರ ಸಿಎಂ ಕುಮಾರಸ್ವಾಮಿ ಹೇಳಿಕೆ

ಕಾಂಗ್ರೆಸ್ ಪಕ್ಷದೊಳಗೆ ಕೆಲವು ನಾಯಕರಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಮತ್ತು ಒತ್ತಡ ಇರುವುದು ಹೌದು...

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗೆ ಕೆಲವು ನಾಯಕರಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಮತ್ತು ಒತ್ತಡ ಇರುವುದು ಹೌದು, ಆದರೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಹಿರಿಯ ಮುಖಂಡರು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಹುದ್ದೆ ನೀಡಿದ ವಿಚಾರದಲ್ಲಿ ಮತ್ತೆ ಖಾತೆ ಹಂಚಿಕೆಯಲ್ಲಿ ಕಾಂಗ್ರೆಸ್ ನ ಕೆಲವು ನಾಯಕರಿಗೆ ಅಸಮಾಧಾನವಾಗಿದೆ. ಸಚಿವ ಸ್ಥಾನ ವಂಚಿತ ಶಾಸಕರು ತಮ್ಮ ಬೇಸರ, ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ನನಗೆ ಸಂಬಂಧ ಇಲ್ಲದಿರುವ ವಿಷಯವಾದರೂ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವುದರಿಂದ ನನಗೂ ಜವಾಬ್ದಾರಿಯಿದೆ ಎಂದು ಹೇಳಿದರು.

ಸಂಪುಟ ರಚನೆಯಲ್ಲಿ ಎಲ್ಲಿ ಎಡವಿದ್ದೇವೆ, ಎಲ್ಲಿ ಸರಿಪಡಿಸಲು ಸಾಧ್ಯವಿದೆ ಎಂಬ ನನ್ನ ಅಭಿಪ್ರಾಯಗಳನ್ನು ನಾನು ಕಾಂಗ್ರೆಸ್ ನಾಯಕರಿಗೆ ತಲುಪಿಸುವೆ, ಆದರೆ ಕಾಂಗ್ರೆಸ್ ಪಕ್ಷದೊಳಗಿನ ತೀರ್ಮಾನಗಳನ್ನು ನಾನು ಸರಿಪಡಿಸಲು ಸಾಧ್ಯವಿಲ್ಲ. ಅದರ ಬಗ್ಗೆ ಅವರೇ ತೀರ್ಮಾನವನ್ನು ತೆಗೆದುಕೊಳ್ಳಬೇಕಿದೆ. ಸದ್ಯದಲ್ಲಿಯೇ ಎಲ್ಲ ಭಿನ್ನಾಭಿಪ್ರಾಯಗಳು ಬಗೆಹರಿಯುವ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಸಾಕಷ್ಟು ಕೊಡುಗೆ ನೀಡಿದೆ. ನನಗೆ ಅನ್ಯಾಯವಾಗಿದೆ ಎಂಬ ಭಾವನೆ ಎಂ ಬಿ ಪಾಟೀಲರಿಗೆ ಇದೆ. ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಸೌಜನ್ಯಕ್ಕೆ ಅವರನ್ನು ಭೇಟಿಯಾಗಿದ್ದೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯದ ಬಗ್ಗೆ ನಾನು ಮಾತನಾಡುವುದಿಲ್ಲ. ಪಾಟೀಲರ ಭಾವನೆಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿಸುತ್ತೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್