ರಾಜಕೀಯ

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.91.84 ಮತದಾನ

Sumana Upadhyaya

ಬೆಂಗಳೂರು: ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಆರು ವಿಧಾನಪರಿಷತ್ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆಗೆ ಮತದಾನ ನಡೆದಿದ್ದು ಇದೇ 12ರಂದು ಫಲಿತಾಂಶ ಪ್ರಕಟವಾಗಲಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಅತಿ ಹೆಚ್ಚು ಶೇಕಡಾ 91.84ರಷ್ಟು ಮತದಾನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಶೇಕಡಾ 64.11ರಷ್ಟು, ದಕ್ಷಿಣ ಶಿಕ್ಷಕರ ಪದವೀಧನ ಕ್ಷೇತ್ರದಲ್ಲಿ ಶೇಕಡಾ 79.91ರಷ್ಟು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಶೇಕಡಾ 80.45ರಷ್ಟು ಮತದಾನವಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಶೇಕಡಾ 70.4 ಮತ್ತು ಈಶಾನ್ಯ ಕ್ಷೇತ್ರದಲ್ಲಿ ಶೇಕಡಾ 70.13ರಷ್ಟು ಮತದಾನ ನಡೆದಿದೆ.

ಎಲ್ಲಾ ಆರು ಕ್ಷೇತ್ರಗಳಲ್ಲಿ ಮೂವರು ವಿಧಾನಪರಿಷತ್ ಸದಸ್ಯರು ಸೇರಿದಂತೆ 75 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ನ ರಮೇಶ್ ಬಾಬು , ಮರಿತಿಬ್ಬೇ ಗೌಡ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ಪರ್ಧೆಯಲ್ಲಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ 22 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

SCROLL FOR NEXT