ಕೆಎಸ್ ಈಶ್ವರಪ್ಪ 
ರಾಜಕೀಯ

ಅತೃಪ್ತ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕೆಎಸ್ ಈಶ್ವರಪ್ಪ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಮೈಸೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. 
ಜನ್ಮದಿನಾಚರಣೆ ಪ್ರಯುಕ್ತ ಇಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಕೆಎಸ್ ಈಶ್ವರಪ್ಪನವರು ಮೈತ್ರಿ ಸರ್ಕಾರದ ಕೆಲ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಈಗಲೇ ಅವರು ಯಾರೆಂದು ನಾನು ಹೇಳುವುದಿಲ್ಲ. ಕಾದು ನೋಡಿ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ಹೊರಟಿದ್ದೇವೆ. ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಅಧ್ಯಕ್ಷರೇ ಮಾರಾಟ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ಅವರು ಮೊದಲ ಹಂತದಲ್ಲೇ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನಗೊಂಡಿದ್ದಾರೆ. ನನ್ನ ಜೊತೆ 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಇದ್ದಾರೆ ಎಂದು ಹೇಳಿದ್ದು ಮೈತ್ರಿ ಸರ್ಕಾರದಕ್ಕೆ ತಲೆ ನೋವಾಗಿ ಪರಿಣಮಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!