2019 ರ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿಯಿಂದ ಸಿದ್ಧತೆ: ಜೂ.15 ಕ್ಕೆ ಬೈಕ್ ರ್ಯಾಲಿಗೆ ಚಾಲನೆ 
ರಾಜಕೀಯ

2019 ರ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿಯಿಂದ ಸಿದ್ಧತೆ: ಜೂ.15 ಕ್ಕೆ ಬೈಕ್ ರ್ಯಾಲಿಗೆ ಚಾಲನೆ

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಈಗಷ್ಟೇ ಇನ್ನೂ ಇಳಿಯುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ 2019 ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಈಗಷ್ಟೇ ಇನ್ನೂ ಇಳಿಯುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ 2019 ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದೆ. 
2019 ರ ಲೋಕಸಭಾ ಚುನಾವಣೆಗೆ ಸಮೂಹ ಸಂಪರ್ಕ ಕಾರ್ಯಕ್ರಮಕ್ಕಾಗಿ ರಾಜ್ಯ ಬಿಜೆಪಿ ಯುವ ಮೋರ್ಚಾ ಘಟಕ ಜೂ.15 ರಂದು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.  ಕೆಲವು ದಿನಗಳ ಹಿಂದೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ 2019 ರ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಸಕ್ರಿಯರಾಗುವಂತೆ ಯುವ ಮೋರ್ಚಾ ಕಾರ್ಯಕರ್ತರಿಗೆ ಯಡಿಯೂರಪ್ಪ ಕರೆ ನೀಡಿದ್ದಾರೆ. 
ಜೂ.15-20 ವರೆಗೆ ಬೈಕ್ ರ್ಯಾಲಿ ನಡೆಯಲಿದ್ದು,ಎಲ್ಲಾ 224 ವಿಧಾನಸಭಾ ಕ್ಷೇತ್ರಗಳನ್ನೂ ತಲುಪುವ ಗುರಿ ಹೊಂದಲಾಗಿದೆ. ಜನ್ ಧನ್, ಮುದ್ರಾ ಯೋಜನೆ ಸೇರಿದಂತೆ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಜನಪರ ಯೋಜನೆಗಳನ್ನು, ಸಾಧನೆಗಳ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ತಿಳಿಸುವುದು ರ್ಯಾಲಿಯ ಮುಖ್ಯ ಉದ್ದೇಶವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!