ಸಾಂದರ್ಭಿಕ ಚಿತ್ರ 
ರಾಜಕೀಯ

ಜೆಡಿಎಸ್ ಜೊತೆ ಚುನಾವಣಾ ಪೂರ್ವ ಮೈತ್ರಿ: 'ಕೈ' ಸಂಸದರಲ್ಲಿ ಮನೆಮಾಡಿದ ಆತಂಕ

ಖಾತೆ ಹಂಚಿಕೆಯಿಂದ ಹಿಡಿದು ಸಚಿವ ಹುದ್ದೆ ಕೈ ತಪ್ಪಿದ ಶಾಸಕರಲ್ಲಿನ ಭಿನ್ನಮತವನ್ನು ಶಮನ ...

ಬೆಂಗಳೂರು: ಖಾತೆ ಹಂಚಿಕೆಯಿಂದ ಹಿಡಿದು ಸಚಿವ ಹುದ್ದೆ ಕೈ ತಪ್ಪಿದ ಶಾಸಕರಲ್ಲಿನ ಭಿನ್ನಮತವನ್ನು ಶಮನ ಮಾಡಲು ಕಾಂಗ್ರೆಸ್ ನಾಯಕತ್ವ ಶ್ರಮಿಸುತ್ತಿರುವಾಗಲೇ ಪಕ್ಷದ ಸಂಸದರಿಂದ ಕೂಡ ಸಮಸ್ಯೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ.

2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಕಾಂಗ್ರೆಸ್ ಸಂಸದರು ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಹೈಕಮಾಂಡ್ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಕುರಿತು ಘೋಷಣೆ ಮಾಡಿದ್ದು, ಜೆಡಿಎಸ್ ರಾಜ್ಯದಲ್ಲಿ 8ರಿಂದ 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಬೇಡಿಕೆಯಿಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪ್ರಸ್ತುತ ಕರ್ನಾಟಕದಿಂದ ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ನ ಸಂಸದರಿದ್ದಾರೆ.ರಾಜಿ ಸಂಧಾನಕ್ಕೆ ಬಾರದಿದ್ದರೆ ಕೆಲವು ಕಾಂಗ್ರೆಸ್ ಸಂಸದರು ತಮ್ಮ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕಾಗಿ ಬರಬಹುದು ಎಂಬ ಕಳವಳ ಕೆಲ ಕಾಂಗ್ರೆಸ್ ಸಂಸದರಲ್ಲಿದೆ.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಜೆಡಿಎಸ್ 8ರಿಂದ 10 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂದು ಒತ್ತಾಯಿಸುವ ಸಾಧ್ಯತೆಯಿದ್ದು ಕಾಂಗ್ರೆಸ್ ಗೆ 18 ಕ್ಷೇತ್ರಗಳನ್ನು ಬಿಟ್ಟುಕೊಡುವ ಸಾಧ್ಯತೆಯಿದೆ. ಜೆಡಿಎಸ್ ಶಿವಮೊಗ್ಗ, ಚಿತ್ರದುರ್ಗ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಬೆಂಗಳೂರು ಉತ್ತರ ಮತ್ತು ಬಿಜಾಪುರ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು ಅದು ಕಾಂಗ್ರೆಸ್ ಸಂಸದರಿಗೆ ಅಸಮಾಧಾನವನ್ನುಂಟುಮಾಡಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಸಚಿವ ಸ್ಥಾನ ಹಂಚಿಕೆ ಮಾಡುವಾಗ ತಮ್ಮನ್ನು ಪಕ್ಷದ ಮುಖಂಡರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲವೆಂದು ಕೆಲವು ಸಂಸದರು ಅಸಮಾಧಾನ ಹೊರಹಾಕಿದ್ದು ಇದು 2019ರ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ನಿಚ್ಚಳವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಾ ಜಿ ಪರಮೇಶ್ವರ್, 2019ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆಗೆ ಚುನಾವಣಾ ಪೂರ್ವ ಮೈತ್ರಿಯ ಕುರಿತು ಸಂಸದರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಕುರಿತು ಕೂಡ ನಾವು ವಿಷಯಗಳನ್ನು ಚರ್ಚೆ ಮಾಡಿದ್ದೇವೆ. ಸಂಸದರ ಗ್ರಹಿಕೆಗಳನ್ನು ಲೋಕಸಭೆ ಚುನಾವಣೆಗೆ ಮುನ್ನ ಪರಿಗಣಿಸುತ್ತೇವೆ. ಸಂಸದರ ಎಲ್ಲಾ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT