ಹುಬ್ಬಳ್ಳಿ: ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಾವು ಒಬ್ಬ ವಚನಭ್ರಷ್ಟ ಎಂಬುದನ್ನು ಮತ್ತೆ ಸಾಬೀತುಪಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಕುಮಾರಸ್ವಾಮಿ ಒಬ್ಬ ವಚನಭ್ರಷ್ಟ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರು ಯಾವತ್ತೂ ರೈತರ ಸಾಲ ಮನ್ನಾ ಮಾಡಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಅವರ ಪಾತ್ರ ಅತ್ಯಂತ ಕಡಿಮೆ ಮತ್ತು ರಾಜ್ಯದ ಆರ್ಥಿಕ ಸ್ಥಿತಿ ಹಾಗೂ ಸರ್ಕಾರ ಉರುಳುವ ಸಾಧ್ಯತೆ ಇರುವುದರಿಂದ ಸಾಲ ಮನ್ನಾ ಮಾಡಲ್ಲ ಎಂದರು.
ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಜಗದೀಶ್ ಶೆಟ್ಟರ್, ಸರ್ಕಾರ ಇನ್ನೂ ಟೇಕ್ ಆಫ್ ಆಗಿಲ್ಲ. ಎಲ್ಲಾ ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಬಹಳ ದಿನ ಉಳಿಯಲ್ಲ ಎಂದರು.
ಇದೇ ವೇಳೆ ಅತೃಪ್ತ ನಾಯಕರು ಬಿಜೆಪಿ ಜತೆ ಕೈಜೋಡಿಸಿದರು ನಾವು ಸರ್ಕಾರ ರಚಿಸಲ್ಲ. ಸದ್ಯದ ಸರ್ಕಾರ ತಾನಾಗಿಯೇ ಬೀಳುವವರೆಗೆ ಬಿಜೆಪಿ ಕಾದು ನೋಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics