ಟಿ ಬಿ ಜಯಚಂದ್ರ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನೂ ಪರಿಗಣಿಸಬೇಕು: ಮಾಜಿ ಸಚಿವ ಜಯಚಂದ್ರ

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಟಿ. ಬಿ. ಜಯಚಂದ್ರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ.

ತುಮಕೂರು: ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಟಿ. ಬಿ. ಜಯಚಂದ್ರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ. ಇದೀಗ ಜಯಚಂದ್ರ ದಿನೇಶ್ ಗುಂಡೂರಾವ್, ಡಿ ಕೆ ಶಿವಕುಮಾರ್, ಎಚ್ ಕೆ ಪಾಟೀಲ್, ಎಮ್. ಬಿ. ಪಾಟೀಲ್, ಬಿ.ಕೆ. ಹರಿಪ್ರಸಾದ್ ಮತ್ತು ಕೆ ಎಚ್ ಮುನಿಯಪ್ಪ ಅವರಂತೆಯೇ ಉನ್ನತ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಶಿರಾ ಜೆಡಿಎಸ್ ಅಭ್ಯರ್ಥಿ ಎದುರು ಸೋಲನುಭವಿಸಿದ್ದ ಜಯಚಂದ್ರ ಶನಿವಾರ ಮಾತನಾಡಿ, ದಶಕಗಳ ಕಾಲ ಕಾಂಗ್ರೆಸ್ ನಲಿದ್ದು ಪಕ್ಷಕ್ಕಾಗಿ ದುಡಿದಿದ್ದೇನೆ. ನಾನೂ ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಡನೆ ಸಮಾಲೋಚಿಸುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಜಯಚಂದ್ರ ಚುನಾವಣೆಯಲ್ಲಿ ಸೋಲನುಭವಿಸಿದ್ದರು. 
"ನಾನು ಚಿಕ್ಕ ವಯಸಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾದೆ. ಬಹಳ ಹಿಂದೆಯೇ ವಿಧಾನಸಭೆಗೆ ಆಯ್ಕೆಯಾಗಿದ್ದೆ. ವರ್ಷಗಳ ಕಾಲ ದಣಿವರಿಯಿಲ್ಲದೆ ಕೆಲಸ ಮಾಡಿದ್ದಾರೆ" ಎಂದು ಜಯಚಂದ್ರ ಹೇಳಿದರು. ಪಕ್ಷ ನೀಡುವ ಯಾವ ಜವಾಬ್ದಾರಿಯನ್ನು ನಿಭಾಯಿಸಲು ನಾನು ಸಿದ್ದನಿದ್ದೇನೆ.ಎಂದಿದ್ದಾರೆ. ಚಿಕ್ಕನಾಯಕನಹಳ್ಳಿಯಿಂದ ತನ್ನ ಮಗ ಸಂತೋಷ್ ಸ್ಪರ್ಧೆಗೆ ಲಾಬಿ ನಡೆಸಿದ್ದರು. ಆದರೆ ಸಂತೋಷ್ ಸಹ ಜಯಗಳಿಸುವಲ್ಲಿ ವಿಫಲವಾಗಿ ಕ್ಂಗ್ರೆಸ್ ಗೆ ಎರಡು ಸ್ಥಾನ ನಷ್ಟವಾಗಿತ್ತು.
ಪ್ರಸ್ತುತ ಡಿಸಿಎಂ, ಕೆಪಿಸಿಸಿ ಅಧ್ಯಕ್ಷರಾದ ಡಾ. ಜಿ.ಪರಮೇಶ್ವರ ಅವರ ಜಿಲ್ಲೆಯವರೇ ಆದ ಜಯಚಂದ್ರ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಮಾತನಾಡಿದ್ದಾರೆ. ಮತ್ತು ತಾನು ಅದಕ್ಕಾಗಿ ಶ್ರಮಿಸುತ್ತೇನೆ ಎಂದಿದ್ದಾರೆ. ಇದಾಗಲೇ ಕಾಂಗ್ರೆಸ್ ನಿಂದ ಪರಮೇಶ್ವರ ಹಾಗೂ ತುಮಕೂರು ಮೂಲದ ಜೆಡಿಎಸ್ ನ ಇನ್ನೋರ್ವ ಶಾಸಕರು ಮಂತ್ರಿಗಳಾಗಿದ್ದಾರೆ.
"ಸಚಿವನಾಗಿದ್ದಾಗ ನಾನು ಸರ್ಕಾರದಲ್ಲಿ  ಉಂಟಾದ ಅನೇಕ ಸಮಸ್ಯೆಯನ್ನು ಬಗೆಹರಿಸಿದ್ದೇನೆ. ನಾನು ಪರಮೇಶ್ವರ, ಸಿದ್ದರಾಮಯ್ಯ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೀಗ ರಾಹುಲ್ ಮತ್ತು ಸೋನಿಯಾ ಗಾಂಧಿಯನ್ನು ಶೀಘ್ರದಲ್ಲೇ ಭೇಟಿಯಾಗಲಿದ್ದೇನೆ " ಅವರು ಹೇಳಿದ್ದಾರೆ.
ದೋಸ್ತಿ ಸರ್ಕಾರದ ಭಿನ್ನಮತದ ಕುರಿತಂತೆ ಮಾತನಾಡಿದ ಜಯಚಂದ್ರ "ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿಲ್ಲ, ಆದರೆ ನಾಯಕರು ಭಿನ್ನಮತ ಶಮನಗೊಳಿಸುತ್ತಾರೆ" ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ
ಶನಿವಾರ ಸುದ್ದಿಗಾರರ ಜತೆ ಮಾತನಾಡಿಒದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ "ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದಿದ್ದಾರೆ.
"ನಾನು ಅದರಲ್ಲಿ ಆಸಕ್ತಿ ಹೊಂದಿಲ್ಲ. ರಾಜ್ಯದ ಜನರು ನಮ್ಮ ಸರ್ಕಾರವನ್ನು ತಿರಸ್ಕರಿಸಿದ್ದಾರೆ ಮತ್ತು ನಮ್ಮ ಕಾರ್ಯಕ್ರಮಗಳನ್ನು ಸ್ವೀಕರಿಸಲಿಲ್ಲ. ನಾನು ಜನರ ತಿರ್ಪು ಗೌರವಿಸುತ್ತೇನೆ. ಎನ್ನುವ ಮೂಲಕ ಪಿಸಿಸಿ ಅಧ್ಯಕ್ಷ ಹುದ್ದೆಗೆ ಅವರು ಆಸಕ್ತಿ ಹೊಂದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ
ಪ್ರಸ್ತುತ ಎಂಟು ವರ್ಷಗಳಿಂದ ಪಕ್ಷದ ರಾಜ್ಯಾದ್ಯಕ್ಷರಾಗಿರುವ ಪರಮೇಶ್ವರ್ ಅವರ ಸ್ಥಾನಕ್ಕೆ ತೀವ್ರ ಪೈಪೋಟಿ ಇದ್ದು ದಿನೇಶ್ ಗುಂಡೂರಾವ್, ಬಿ.ಕೆ.ಹರಿಪ್ರಸಾದ್,ಸೇರಿ ಅನೇಕರು ಲಾಬಿ ನಡೆಸಿದ್ದಾರೆ.
 ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗದ ಪಕ್ಷದ ನಾಯಕರಾಗಿರುವುದಲ್ಲದೆ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT