ರಾಜಕೀಯ

ಮುತಾಲಿಕ್ 'ನಾಯಿ' ಹೇಳಿಕೆಗೆ ಸಿಎಂ ಕುಮಾರಸ್ವಾಮಿ ಗರಂ!

Vishwanath S
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಕರ್ನಾಟಕದಲ್ಲಿ ಒಂದು ನಾಯಿ ಸತ್ತರೂ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಹೊಣೆಯೇ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ. ಇನ್ನು ಇದಕ್ಕೆ ಸಹಾಯ ಮಾಡುವವರಿಗೂ ಶಿಕ್ಷೆಯಾಗುವುದು ಖಂಡಿತ. ಸದ್ಯಕ್ಕೆ ಪ್ರಕರಣ ಸಂಬಂಧ ನಾನು ಏನನ್ನು ಹೇಳುವುದಿಲ್ಲ. ಮುತಾಲಿಕ್ ಅಥವಾ ಯಾರೇ ಆಗಿರಲಿ ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. 
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶ್ರೀರಾಮಸೇನೆಯ ಪಾತ್ರವಿಲ್ಲ. ಹತ್ಯೆ ಪ್ರಕರಣದಲ್ಲಿ ಹಿಂದೂಪರ ಸಂಘಟನೆಯ ಕೈವಾಡವಿದೆ ಎಂದು ಆರೋಪಿಸಲಾಗುತ್ತಿದೆ. ಗೌರಿ ಹತ್ಯೆ ಪ್ರಕರಣವನ್ನು ಪರೋಕ್ಷವಾಗಿ ಹಿಂದೂ ಸಂಘಟನೆಗಳ ಮೇಲೆ ಹೇರುವ ಹುನ್ನಾರ ನಡೆದಿದ್ದು, ಇದು ಸರಿಯಲ್ಲ ಎಂದು ಹೇಳಿದ್ದಾರೆ.
ಅಂತೆಯೇ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡುತ್ತಿರುವವರ ವಿರುದ್ಧ ವಾಗ್ದಾಳಿ ನಡೆಸಿದ ಮುತಾಲಿಕ್, ಗೌರಿ ಲಂಕೇಶ್ ಹತ್ಯೆಗೂ ಪ್ರಧಾನಿ ಮೋದಿಗೂ ಏನು ಸಂಬಂಧ. ಗೌರಿ ಹತ್ಯೆ ನಡೆದಿರುವುದು ಕರ್ನಾಟಕದಲ್ಲಿ. ರಾಜ್ಯ ಸರ್ಕಾರ ಏನು ಸತ್ತಿತ್ತೆ. ರಾಜ್ಯಗಳಲ್ಲಾಗುವ ಹತ್ಯೆಗಳಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯೇ ಹೊಣೆಯಾದರೆ ಯುಪಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ 2 ಮತ್ತು ಮಹಾರಾಷ್ಟ್ರದಲ್ಲಿ 2 ಒಟ್ಟು ನಾಲ್ಕು ಹತ್ಯೆಗಳಾದವು. ಆಗ ಯಾರೂ ಈ ಬಗ್ಗೆ ಮಾತನಾಡಲಿಲ್ಲ ಏಕೆ ಎಂದು ಪ್ರಶ್ನಿಸಿದ್ದರು.
SCROLL FOR NEXT