ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಜೆಡಿಎಸ 
ರಾಜಕೀಯ

ರಾಜ್ಯ ಸರ್ಕಾರಕ್ಕೆ ಹೊರೆಯಾಗದಂತೆ ರೈತರ ಸಾಲ ಮನ್ನಾ: ರಾಹುಲ್ ಗೆ ಸಿಎಂ ಕುಮಾರಸ್ವಾಮಿ ಭರವಸೆ

ಭಿನ್ನಮತೀಯ ಶಾಸಕರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಯತ್ನಿಸುತ್ತಿರುವುದರ ಮಧ್ಯೆ ...

ಬೆಂಗಳೂರು: ಭಿನ್ನಮತೀಯ ಶಾಸಕರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಯತ್ನಿಸುತ್ತಿರುವುದರ ಮಧ್ಯೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಿನ್ನೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸಮ್ಮಿಶ್ರ ಸರ್ಕಾರ ಸುಗಮವಾಗಿ ಆಡಳಿತ ನಡೆಸುವಂತೆ ಮಾಡಲು ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಮೇಲೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಹುಲ್ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಹುಲ್ ಗಾಂಧಿಯವರೊಂದಿಗೆ ಇದು ಸೌಹಾರ್ದ ಭೇಟಿಯಾಗಿದ್ದರೂ ಕೂಡ ರಾಜ್ಯದ ಅಭಿವೃದ್ಧಿ ಕುರಿತು ಹಲವು ವಿಷಯಗಳನ್ನು ಚರ್ಚೆ ಮಾಡಿದೆವು. ರೈತರ ಸಾಲ ಮನ್ನಾ ವಿಷಯ ಕೂಡ ಚರ್ಚೆಗೆ ಬಂತು. ಹಣಕಾಸಿನ ಸ್ಥಿರತೆಗೆ ಯಾವುದೇ ಧಕ್ಕೆಯಾಗದಂತೆ ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಎಂದು ಕೂಡ ರಾಹುಲ್ ಗಾಂಧಿಯವರಿಗೆ ಭರವಸೆ ನೀಡಿದ್ದೇನೆ ಎಂದು ಹೇಳಿದರು.

ಜೆಡಿಎಸ್ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರೈತರ ಸಾಲ ಮನ್ನಾ ಮಾಡುವ ವಿಚಾರವಾಗಿ ಬಿಜೆಪಿಯಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂದು ಮುಖ್ಯಮಂತ್ರಿ ರಾಹುಲ್ ಗಾಂಧಿಯವರಿಗೆ ಮನದಟ್ಟು ಮಾಡಿದ್ದು ಅವರು ಕೂಡ ರೈತರ ಸಾಲಮನ್ನಾಗೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಮುಂದಿನ 5 ವರ್ಷಗಳ ಕಾಲ ಸ್ಥಿರ ಸರ್ಕಾರ ರಚನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೈಜೋಡಿಸಿದ್ದು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿವೆ. ಸರ್ಕಾರದ ಉದ್ದೇಶವನ್ನು ಈಡೇರಿಸಲು ರಾಹುಲ್ ಗಾಂಧಿ ಸಂಪೂರ್ ಬೆಂಬಲ ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ತೆರಳಿ ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಮುನ್ನ ಕಾಂಗ್ರೆಸ್ ನ ಕೆಲವು ಭಿನ್ನಮತೀಯ ಶಾಸಕರು ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ಕಲ್ಪಿಸಿಕೊಡುವಂತೆ ಒತ್ತಡ ಹೇರಿದ್ದರು. ಆದರೆ ತಾವು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಲ್ಲ ಬದಲಿಗೆ ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಚರ್ಚಿಸಲು ಎಂದು ಶಾಸಕರು ಹೇಳಿದ್ದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಾವು ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ಮಾಡಿಲ್ಲ, ಅದನ್ನು ಅವರು ಕಾಂಗ್ರೆಸ್ ಶಾಸಕರೊಂದಿಗೆ ಚರ್ಚೆ ಮಾಡಿ ನಿರ್ಧರಿಸಬೇಕು. ಕಾಂಗ್ರೆಸ್ ನಾಯಕರೇ ಪಕ್ಷದೊಳಗೆ ಆ ವಿಷಯವನ್ನು ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಈ ಮಧ್ಯೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಮುಖ್ಯಮಂತ್ರಿಯವರಿಗೆ ರಾಹುಲ್ ಗಾಂಧಿಯವರಿಂದ ಒಪ್ಪಿಗೆ ಸಿಕ್ಕಿದೆ ಎನ್ನಲಾಗುತ್ತಿದೆ. ಕಳೆದ ಶನಿವಾರ ಮುಖ್ಯಮಂತ್ರಿಯವರು ಈಗ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಅಗತ್ಯವಿಲ್ಲ, ಪೂರಕ ಬಜೆಟ್ ಮಂಡಿಸಿದರೆ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ ಅದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಿರಾಕರಿಸಿದ್ದರು. ರಾಜ್ಯದ ಜನತೆಗೆ ಉತ್ತಮ ಆಡಳಿತ ಕೊಡಲು ಪೂರ್ಣ ಪ್ರಮಾಣದ ಉತ್ತಮ ಬಜೆಟ್ ಅಗತ್ಯ ಎಂದು ಹೇಳಿದ್ದರು.

ನೆಲಮಂಗಲ-ಹಾಸನ ರಸ್ತೆ ಮೇಲ್ದರ್ಜೆಗೆ: ಕೇಂದ್ರಕ್ಕೆ ಮುಖ್ಯಮಂತ್ರಿ
ಈ ಮಧ್ಯೆ ರಾಜ್ಯದಲ್ಲಿರುವ ಹಲವು ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ನೆಲಮಂಗಲ-ಹಾಸನ ಹೆದ್ದಾರಿ, ತುಮಕೂರು-ಶಿವಮೊಗ್ಗ ರಸ್ತೆ ಅಗಲೀಕರಣ, ಬೆಳಗಾವಿ ಒಆರ್ಆರ್ ಮತ್ತು ಸಾಗರ-ಸಿಗಂದೂರು ರಸ್ತೆ ಅಭಿವೃದ್ಧಿಗಳು ಸೇರಿವೆ. ಕೇಂದ್ರ ಹೆದ್ದಾರಿ ಸಚಿವಾಲಯ ರಾಜ್ಯಕ್ಕೆ 34 ಸಾವಿರ ಕೋಟಿ ರೂಪಾಯಿಯ ಹೆದ್ದಾರಿ ಯೋಜನೆಗೆ ಅನುಮೋದನೆ ನೀಡಿದೆ. ರಾಜ್ಯ ಸಲ್ಲಿಸಿರುವ ಪ್ರಸ್ತಾವನೆಗೆ 570 ಕೋಟಿ ರೂಪಾಯಿ ಜಾರಿ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ