ಬೆಂಗಳೂರು:ತೆರಿಗೆ ವಂಚನೆ ಸಂಬಂಧ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿರುವುದು ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆಯಿದೆ. ಸದ್ಯಕ್ಕೆ ಸಟಿವ ಡಿ.ಕೆ ಶಿವಕುಮಾರ್ ಅವರ ಬೆಂಬಲಕ್ಕೆ ಇರುವುದಾಗಿ ಹೇಳಿರುವ ಜೆಡಿಎಸ್ ಪ್ರಕರಣ ಸಂಬಂಧ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಆದಾಯ ತೆರಿಗೆ ಕಾಯಿದೆಯಡಿ ಶಿವಕುಮಾರ್ ತೆರಿಗೆ ವಂಚನೆ ಹಾಗೂ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾಗಯಾಗಿದ್ದಾರೆ, ಎಂಬ ದೂರಿನ ಅನ್ವಯ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆಗಸ್ಟ್ 2 ರೊಳಗೆ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ, ಸದ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿರುವ ಡಿಕೆ ಶಿವಕುಮಾರ್,ತಮ್ಮ ಸರ್ಕಾರದ ಸಚಿವರನ್ನು ಸಮರ್ಥಿಸಿಕೊಳ್ಳಲು ಜೆಡಿಎಸ್ ಗೆ ಕಷ್ಟವಾಗುವ ಸಾಧ್ಯತೆಯಿದೆ.
ಡಿಕೆ ಶಿವಕುಮಾರ್ ಬೆಂಬಲಕ್ಕೆ ಜೆಡಿಎಸ್ ನಿಂತಿದೆ. ಎಚ್ .ಡಿ ಕುಮಾರ ಸ್ವಾಮಿ ಅವರ ಸಂಪುಟ ಸಹೋದ್ಯೋಗಿಗಳನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದಾರೆ, ಕುಮಾರ ಸ್ವಾಮಿ ಸರ್ಕಾರದ ಸಚಿವರನ್ನು ಸಿಕ್ಕಿಹಾಕಿಸಿ ಬಿಜೆಪಿ ಆಟ ಆಡುತ್ತಿದೆ, ಇದೊಂದು ತಿರುಚಿದ ಪ್ರಕರಣವಾಗಿದ್ದು ನಾವೆಲ್ಲಾ ಶಿವಕುಮಾರ್ ಅವರ ಜೊತೆಗಿದ್ದೇವೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.
ಸದ್ಯ ಪ್ರಕರಣ ಕೋರ್ಟ್ ನಲ್ಲಿದ್ದು, ಗುಜರಾತ್ ರಾಜ್ಯಸಭಾ ಚುನಾವಣೆಯಿಂದ ಇಲ್ಲಿಯವರೆಗೆ ಬಿಜೆಪಿ ಶಿವಕುಮಾರ್ ಅವರನ್ನು ಹೇಗೆ ಟಾರ್ಗೆಟ್ ಮಾಡುತ್ತಿದೆ ಎಂಬುದನ್ನು ಇಡೀ ರಾಷ್ಚ್ರವೇ ನೋಡುತ್ತಿದೆ, ಜನರಿಗೆ ಎಲ್ಲೆ ಬೆಳವಣೆಗೆಗಳ ಬಗ್ಗೆ ಅರಿವಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನೂ ತಮ್ಮ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಡಿ ಕೆ ಶಿವಕುಮಾರ್ ತಮ್ಮ ವಿರುದ್ಧದ ಆರೋಪವನ್ನು ತಳ್ಳಿ ಹಾಕಿದ್ದು ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics