ಶಾಸಕ ತನ್ವೀರ್ ಸೇಠ್ ಮತ್ತು ಸಚಿವ ಜಮೀರ್ 
ರಾಜಕೀಯ

ಕೇವಲ ಜನರನ್ನು ಸೇರಿಸುವುದಲ್ಲ, ಮನಗೆದ್ದು ತೋರಿಸಬೇಕು: ಸಚಿವ ಜಮೀರ್'ಗೆ ತನ್ವೀರ್ ತಿರುಗೇಟು

ನರಸಿಂಹರಾಜ ಕ್ಷೇತ್ರಕ್ಕೆ ಬಂದು ಶಕ್ತಿ ಪ್ರದರ್ಶನ ಮಾಡುವುದಾಗಿ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹಮದ್ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ತನ್ವೀರ್ ಸೇಠ್ ಅವರು, ಶಕ್ತಿ ಪ್ರದರ್ಶನವೆಂದರೆ ಜನರನ್ನು ಸೇರಿಸಿ ತೋರಿಸುವುದಲ್ಲ...

ಮೈಸೂರು: ನರಸಿಂಹರಾಜ ಕ್ಷೇತ್ರಕ್ಕೆ ಬಂದು ಶಕ್ತಿ ಪ್ರದರ್ಶನ ಮಾಡುವುದಾಗಿ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹಮದ್ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ತನ್ವೀರ್ ಸೇಠ್ ಅವರು, ಶಕ್ತಿ ಪ್ರದರ್ಶನವೆಂದರೆ ಜನರನ್ನು ಸೇರಿಸಿ ತೋರಿಸುವುದಲ್ಲ, ಜನರ ಮನಸ್ಸನ್ನು ಗೆದ್ದು ತೋರಿಸುವುದು ಎಂದು ಬುಧವಾರ ಹೇಳಿದ್ದಾರೆ. 
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಮೀರ್ ಅಹಮದ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಜನಾಂಗ ಒಪ್ಪಿಕೊಳ್ಳುವ ನಾಯಕತ್ವ ಅವನಲ್ಲಿ ಇಲ್ಲ. ಕಳೆದ ಚುನಾವಣೆಯಲ್ಲಿ ಕೆಟ್ಟ ಹುಳುವಾಗಿ ಬೆಳೆದಿರುವವರ ಪರವಾಗಿ ಜಮೀರ್ ಕೆಲಸ ಮಾಡಿದ್ದ. ನಾನು ಮಾಧ್ಯಮಗಳ ಮುಂದೆ ಸಂಘರ್ಷಕ್ಕೆ ಇಳಿಯುವುದಿಲ್ಲ. ರಾಜಕೀಯವಾಗಿ ಅಥವಾ ವೈಯಕ್ತಿಕವಾಗಿ ಸಂಘರ್ಷಕ್ಕೆ ಸಿದ್ಧ ಎಂದು ಸವಾಲು ಹಾಕಿದರು. 
ಜಮೀರ್ ನೀಡಿರುವ ಸವಾಲನ್ನು ಸ್ವೀಕರಿಸುವುದೂ ಇಲ್ಲ, ತಳ್ಳಿ ಹಾಕುವುದೂ ಇಲ್ಲ. ಕ್ಷೇತ್ರಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟದ್ದು. ಈ ಬಗ್ಗೆ ವರಿಷ್ಠರ ಗಮನಕ್ಕೆ ತಂದಿದ್ದೇನೆ. ನಿನ್ನೆ ಮೊನ್ನೆ ಪಕ್ಷಕ್ಕೆ ಬಂದವರಿಗೆ ಕಾಂಗ್ರೆಸ್ ತತ್ವ ಸಿದ್ಧಾಂತ ಗೊತ್ತಿರುವುದಿಲ್ಲ. ಇದಕ್ಕಾಗಿ ಅವರನ್ನು ವಿರೋಧಿಸಿದ್ದೇನೆ ಎಂದು ತಿಳಿಸಿದರು. 
ನಾವು ಸಂಘಟಿತರಾಗಿ ಸ್ಥಾನ ಕೇಳುತ್ತಿಲ್ಲ ಎಂಬುದು ನನ್ನ ಅಭಿಪ್ರಾಯ. ಪಕ್ಷಕ್ಕೆ ಮುಜುಗರ ತರುವಂತೆ ಮಾತನಾಡಬೇಡಿ ಎಂದು ಹೈಕಮಾಂಡ್ ನಿಂದ ಸೂಚನೆ ಬಂದಿದ್ದು, ಅದನ್ನು ಪಾಲಿಸುತ್ತೇನೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ