ಜಿ.ಟಿ ದೇವೇಗೌಡ 
ರಾಜಕೀಯ

ಬದಲಾಗದ ಖಾತೆ: ಷರತ್ತಿನೊಂದಿಗೆ 'ಉನ್ನತ ಶಿಕ್ಷಣ'ಕ್ಕೆ ಜಿಟಿ ದೇವೇಗೌಡ ಒಪ್ಪಿಗೆ!

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅಂತಿಮವಾಗಿ ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲು ಒಪ್ಪಿದ್ದಾರೆ....

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅಂತಿಮವಾಗಿ ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲು ಒಪ್ಪಿದ್ದಾರೆ.
ಈ ಮೊದಲು ಉನ್ನತ ಶಿಕ್ಷಣ ತಮಗೆ ಬೇಡ, ಬೇರೆ ಖಾತೆ ನೀಡಿ ಎಂದು ಜಿಟಿಡಿ ಮನವಿ ಮಾಡಿದ್ದರು,  ಆದರೆ ಖಾತೆ ಬದಲಾವಣೆಗೆ ಸಿಎಂ ಕುಮಾರ ಸ್ವಾಮಿ ಒಪ್ಪಿರಲಿಲ್ಲ.
ಗುರುವಾರ ಜಿ.ಟಿ ದೇವೇಗೌಡ ಅವರನ್ನು ಭೇಟಿ ಮಾಡಿದ ಕುಮಾರ ಸ್ವಾಮಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಶುಕ್ರವಾರ ಚಾರ್ಜ್ ತೆಗೆದುಕೊಳ್ಳುವುದಾಗಿ ಜಿಟಿಡಿ ತಿಳಿಸಿದ್ದಾರೆ.
ಆದರೆ ಉನ್ನತ ಶಿಕ್ಷಣ ಖಾತೆ ವಹಿಸಿಕೊಳ್ಳಲು ಜಿಟಿಡಿ ಷರತ್ತು ವಿಧಿಸಿದ್ದಾರೆ. ಮೈಸೂರು ವಿವಿ ಮಾಜಿ ಉಪ ಕುಲಪತಿ ಹಾಗೂ ಎಚ್.ಡಿ ದೇವೇಗೌಡರ ಸಂಬಂಧಿಯಾಗಿರುವ ಪ್ರೊ.ಕೆ.ಎಸ್ ರಂಗಪ್ಪ ತಮ್ಮ ಖಾತೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು, ಮೂಗು ತೂರಿಸಬಾರದು ಎಂಬ ಷರತ್ತು ಹಾಕಿದ್ದು, ಈ ಷರತ್ತಿಗೆ ಸಿಎಂ ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT