ಜಿ ಪರಮೇಶ್ವರ 
ರಾಜಕೀಯ

ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ: ಪರಮೇಶ್ವರ

ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

ಚಿತ್ರದುರ್ಗ: ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಚಿತ್ರದುರ್ಗದಲ್ಲಿ ದೋಸ್ತಿ ಸರ್ಕಾರದ ಭಿನ್ನಮತದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ, ನಾನು ಕೆಪಿಸಿಸಿ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಸಮ್ಮಿಶ್ರ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ ಎಂದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಸಿಡುಕಿನಿಂದಲೇ ಉತ್ತರಿಸಿದ ಪರಮೇಶ್ವರ ಅವರು, ಸಮ್ಮಿಶ್ರ ಸರ್ಕಾರ ರಚಿಸುವ ಸಂದರ್ಭದಲ್ಲಿ ಕಾಂಗ್ರೆಸ್ - ಜೆಡಿಎಶ್ ಒಪ್ಪಂದ ಮಾಡಿಕೊಂಡಿವೆ. ಅದರಂತೆ ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಇರುತ್ತೆ. ಒಂದೇ ಪ್ರಶ್ನೆಯನ್ನು ಎಷ್ಟು ಬಾರಿ ಕೇಳಿದರೂ ನನ್ನ ಉತ್ತರ ಇದೆ ಎಂದರು.
ಪರಮೇಶ್ವರ ಅವರು ಸಮ್ಮಿಶ್ರ ಸರ್ಕಾರ ಅವಧಿ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು ಸಹ, ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನಾಗುತ್ತದೆ ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎನ್ನುವ ಮೂಲಕ ಮೈತ್ರಿ ಸರ್ಕಾರದ ಆಯುಸ್ಸಿನ ಬಗ್ಗೆ ಪ್ರಶ್ನೆ ಹುಟ್ಟುಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ