ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯರನ್ನು ಕಡೆಗಣಿಸಿದರೆ ಸರ್ಕಾರ ಉಳಿಯುತ್ತಾ?: ಕಾಂಗ್ರೆಸ್ ಶಾಸಕ

ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗಿಲ್ಲ...

ಮಂಗಳೂರು: ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗಿಲ್ಲ. ಅವರನ್ನು ಕಡೆಗಣಿಸಿದರೆ ಸರ್ಕಾರ ಉಳಿಯುತ್ತಾ? ಎಂದು ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವರು ಬುಧವಾರ ಪ್ರಶ್ನಿಸಿದ್ದಾರೆ.
ಧರ್ಮಸ್ಥಳದ ಶಾಂತಿ ವನದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ಶಾಸಕರ ತಂಡ ಆಗಮಿಸಿದ್ದು, ಈ ವೇಳೆ ವರದಿಗಾರರೊಂದಿಗೆ ಮಾತನಾಡಿದ ನಾರಾಯಣ ರಾವ್ ಅವರು, 'ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗಿಲ್ಲ. ಅವರು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು. ಅವರನ್ನು ಕಡೆಗಣಿಸಿದರೆ ಸರ್ಕಾರ ಉಳಿಯುತ್ತಾ, ಸರ್ಕಾರದಲ್ಲಿ ಅವರದ್ದೇ ಪ್ರಮುಖ ಪಾತ್ರ. ಅವರದ್ದೇ ನೇತೃತ್ವ ಎಂದರು. 
ಈ ವೇಳೆ ಮತಾನಾಡಿದ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಭೇಟಿಯಲ್ಲಿ ಯಾವುದೇ ರಾಜಕೀಯವಿಲ್ಲ. ಸಿದ್ದರಾಮಯ್ಯನವರು ನಮ್ಮ ನಾಯಕರು, ಸಿಎಲ್‌ಪಿ ಲೀಡರ್‌ ಹಾಗಾಗಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದೇವೆ ಎಂದರು.
ದೋಸ್ತಿ ಸರ್ಕಾರದ ಭವಿಷ್ಯದ ಬಗ್ಗೆ ಸಿದ್ದರಾಮಯ್ಯ ಅವರು ಶಂಕೆ ವ್ಯಕ್ತಪಡಿಸಿದ ವಿಡಿಯೋ ಭಾರೀ ಚರ್ಚೆ ಹುಟ್ಟು ಹಾಕಿದ ಬೆನ್ನಲ್ಲೆಉಜಿರೆಯ ಶಾಂತಿವನದ ಪ್ರಕೃತಿ ಚಿಕಿತ್ಸಾಲಯಕ್ಕೆ ಸಚಿವರು, ಕಾಂಗ್ರೆಸ್‌ ಶಾಸಕರು ಮತ್ತು ಮುಖಂಡರು ಆಗಮಿಸಿ ಮಹತ್ವದ ಚರ್ಚೆ ನಡೆಸಿದ್ದು, ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 
ಸಚಿವರಾದ ಶಿವಾನಂದ ಪಾಟೀಲ್‌ , ರಮೇಶ್‌ ಜಾರಕಿಹೋಳಿ , ಬಳ್ಳಾರಿ ಶಾಸಕ ನಾಗೇಂದ್ರ , ಅಥಣಿ ಶಾಸಕ ಮಹೇಶ್‌ ಕಮಟಳ್ಳಿ , ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಬಸವ ಕಲ್ಯಾಣ ಶಾಸಕ ಬಿ.ನಾರಾಯಣ ರಾವ್‌, ರಾಯಚೂರು ಸಂಸದ ಬಿ.ವಿ.ನಾಯಕ್‌, ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌, ಮಸ್ಕಿ ಶಾಸಕ ಪ್ರತಾಪ್‌ ಗೌಡ ಪಾಟೀಲ್‌, ಮಾಜಿ ಸಚಿವ ಆಂಜನೇಯ, ಪರಿಷತ್‌ ಸದಸ್ಯ ಧರ್ಮಸೇನಾ, ಐವಾನ್‌ ಡಿ ಸೋಜ ಅವರು ಶಾಂತಿವನಕ್ಕೆ ಭೇಟಿ ನೀಡಿ ಮಾತುಕತೆಯಲ್ಲಿ ಪಾಲ್ಗೊಂಡಿದ್ದಾರೆ. 
ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಈ ಎಲ್ಲಾ ಶಾಸಕರು ಮತ್ತು ಸಚಿವರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT