ಸಿದ್ದರಾಮಯ್ಯ ಜೊತೆಯಲ್ಲಿ ಸಚಿವರು, ಶಾಸಕರ ಚಿತ್ರ
ಬೆಂಗಳೂರು/ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದುಕೊಂಡೆೇ ಸಮ್ಮಿಶ್ರ ಸರ್ಕಾರದ ಬಗ್ಗೆ ಸಿಡಿಸಿದ ಮಾತಿನ ತುಣುಕುಗಳು ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಬೀಸಿದ್ದು, ಕಾಂಗ್ರೆಸ್ ಹೈಕಮಾಂಡ್ ಗೊ ಭೀತಿಯನ್ನುಂಟುಮಾಡಿವೆ.
ಈ ಬೆನ್ನೆಲ್ಲೆ ಇಬ್ಬರು ಸಚಿವರು , ಏಳು ಮಂದಿ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ.ಇದರ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸುತ್ತಿದ್ದು, ಸಿದ್ದರಾಮಯ್ಯ ಮನವೊಲಿಸಿ ಸಮಸ್ಯೆ ಪರಿಹರಿಸಲು ಮುಂದಾಗಿದ್ದಾರೆ.
ಸಿದ್ದರಾಮಯ್ಯ ನಾಯಕತ್ವದಲ್ಲೇ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದು, ಅವರ ಭೇಟಿ ಸೌಜನ್ಯರೀತಿಯದ್ದಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. 30 ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಅವರಿಗೆ ನಿಷ್ಠೆ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನ ಹಾಗೂ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಜೆಡಿಎಸ್ ಕೈ ಮೇಲಾಗುತ್ತಿರುವ ಬಗ್ಗೆ ಈ ಗುಂಪು ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ದೆಹಲಿಯಲ್ಲಿ ನಿನ್ನೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ , ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಆಗದು. ಕೆ. ಸಿ. ವೇಣುಗೋಪಾಲ್ ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಒತ್ತಾಯಿಸಿದ್ದಾರೆ.
ಈ ಮಧ್ಯೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ ಮಾಜಿ ರಾಜ್ಯಸಭಾ ಸದಸ್ಯ ರೆಹಮಾನ್ ಖಾನ್ ಈ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಶಾಸಕರು ಪ್ರತಿಷ್ಠೆ ಬದಿಗೊತ್ತಿ ಜನತೆಗೆ ನೀಡಿರುವ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
ಕೆ. ಸಿ. ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸುತ್ತಿದ್ದು, ಸಿದ್ದರಾಮಯ್ಯ ಅವರನ್ನು ಮನವೊಲಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕೂಡಾ ಸಿದ್ದರಾಮಯ್ಯ ಜೊತೆಗೆ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.