ದೇವೇಗೌಡ ಮತ್ತು ಮಾಯಾವತಿ 
ರಾಜಕೀಯ

ರಾಷ್ಟ್ರ ರಾಜಕಾರಣದಲ್ಲಿ ಶಕ್ತಿ ಪ್ರದರ್ಶನಕ್ಕೆ ದೇವೇಗೌಡ ಸಜ್ಜು: ಮಾಯಾವತಿ ಓಲೈಕೆಯಲ್ಲಿ ಮಾಜಿ ಪ್ರಧಾನಿ

ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಸಿದ್ದಾರೆ,....

ಬೆಂಗಳೂರು: ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಸಿದ್ದಾರೆ,. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ತನ್ನ ಮೈತ್ರಿ ಪಕ್ಷ ಬಿಎಸ್ ಪಿಗೆ ಕರ್ನಾಟಕದಲ್ಲಿ ಒಂದು ಲೋಕಸಬೆ ಸೀಟು ನೀಡುವುದಾಗಿ ಘೋಷಿಸಿದ್ದಾರೆ.
ಬಿಎಸ್ ಪಿ ನಾಯಕಿ ಮಾಯಾವತಿ ಅವರನ್ನು ಓಲೈಸುವುದಕ್ಕಾಗಿ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ ಪಿ ಶಾಸಕರೊಬ್ಬರನ್ನು ಸಚಿವರನ್ನಾಗಿಸಿದ್ದಾರೆ, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಘೋಷಿಸಿಕೊಂಡಿವೆ.
ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ ಪಿ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಾಗೆಯೇ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ ಪಿಗೆ ಒಂದು ಸ್ಥಾನ ನೀಡುವುದಾಗಿ ದೇವೇಗೌಡ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಸುದ್ಧಿಗೋಷ್ಚಿಯಲ್ಲಿ ಮಾತನಾಡಿದ ದೇವೇಗೌಡ, ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಖೋಟಾದಲ್ಲಿ ಜೆಡಿಎಸ್ ಗೆ ಒಂದು ಅಥವಾ 2 ಸೀಟು ನೀಡುವಂತೆ ಕೋರಿದ್ದಾರೆ,.ಮಾಯಾವತಿ ಒಪ್ಪಿದರೇ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಸ್ಪರ್ದಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕೇವಲ ದಲಿತರು ಹಾಗೂ ಮುಸ್ಲಿಮರ ಓಲೈಕೆಗೆ ದೇವೇಗೌಡರು ಸೀಮಿತವಾಗದೇ ರಾಷ್ಟ್ರ ಮಟ್ಟದಲ್ಲಿ ತಮ್ಮ ರಾಜಕಾರಣದ ಸಾಮರ್ಥ್ಯ ತೋರಲು ಮುಂದಾಗಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಒಂದಾಗಿ ಬಿಜೆಪಿ ಸೋಲಿಸಲು ಪಣ ತೊಟ್ಟಿವೆ. ಮೈತ್ರಿ ಕೂಟದಲ್ಲಿ ಪ್ರಧಾನಮಂತ್ರಿಯಾಗಿ ಕೆಲಸ ಮಾಡಿದ ಅನುಭವ ದೇವೇಗೌಡರಿಗಿದೆ, ಇನ್ನೂ ಲೋಕಸಭಾ ಚುನಾವಣೆಯಲ್ಲಿ ಸೀಟುಗಳಿಗಾಗಿ ಕಾಂಗ್ರೆಸ್ ಜೊತೆ ದೇವೇಗೌಡ ಚೌಕಾಶಿ ನಡೆಸಲಿದ್ದಾರೆ,  ರಾಜ್ಯದ 28 ಸೀಟುಗಳ ಪೈಕಿ ಜೆಡಿಎಸ್ 10 ಕ್ಷೇತ್ರಗಳನ್ನು ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ, ಆದರೆ ಮೂರರಿಂದ 4 ಕ್ಷೇತ್ರಗಳನ್ನಷ್ಟೇ ಬಿಟ್ಟುಕೊಡುವ ಮನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ.
ಮಾಯಾವತಿ, ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್,  ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ,  ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಅವರುಗಳ ಜೊತೆ ದೇವೇಗೌಡರು ಚೌಕಾಶಿ ನಡೆಸುವ ಸಾಧ್ಯತೆಗಳಿವೆ, ಮುಲಾಯಂ ಸಿಂಗ್ ಮತ್ತು ಇತರ ನಾಯಕರ ಜೊತೆ ಮುಂಬರುವ ದಿನಗಳಲ್ಲಿ ಚರ್ಚೆ ನಡೆಸುತ್ತೇನೆ, ಎನ್ ಡಿ ಎ ವಿರೋಧಿ ಪಡೆ ಒಟ್ಟಾಗಿ ಯುಪಿಎ ಮೈತ್ರಿಕೂಟ ಅಧಿಕಾರಕ್ಕೆ ತರಲು ಯತ್ನಿಲಾಗುತ್ತಿದೆ ಎಂದು ಹೇಳಿದ್ದಾರೆ,.  ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹಾಗೂ ಆಂಧ್ರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ಮುಂದಿನ ಬೆಳವಣಿಗೆ ನೋಡಿಕೊಂಡು ಮೈತ್ರಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!