ಡಿಕೆ ಶಿವಕುಮಾರ್ 
ರಾಜಕೀಯ

ಜೆಡಿಎಸ್ ಒಂದು ಅವಕಾಶವಾದಿ ಪಕ್ಷ: ಡಿಕೆ ಶಿವಕುಮಾರ್

ಮಾರ್ಚ್ 23ರಂದು ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನಾಮನಿರ್ದೇಶಿತ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡುವುದಿಲ್ಲ ಎಂಬ ಸುಳಿವನ್ನು ನೀಡಿದ್ದಾರೆ...

ತುಮಕೂರು: ಮಾರ್ಚ್ 23ರಂದು ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನಾಮನಿರ್ದೇಶಿತ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡುವುದಿಲ್ಲ ಎಂಬ ಸುಳಿವನ್ನು ನೀಡಿದ್ದಾರೆ. 
ಮದುಗಿರಿ ತಾಲೂಕಿನ ಬದವನಹಳ್ಳಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ತಮ್ಮನ್ನು ಬೆಂಬಲಿಸುವಂತೆ ಜೆಡಿಎಸ್ ಪಕ್ಷ ಕಾಂಗ್ರೆಸ್ ಬಳಿ ಬೇಡಿಕೊಳ್ಳುತ್ತಿದ್ದಾರೆ. 40 ಜೆಡಿಎಸ್ ಶಾಸಕರ ಪೈಕಿ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ. ಇನ್ನು ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳಿದ್ದಾರೆ. 
ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಬೆಂಬಲದಿಂದಾಗಿ ದೇಶದ ಪ್ರಧಾನಿಯಾದರು. ಮಣ್ಣನ ಮಗ ಈ ವಿಚಾರವನ್ನು ಎಲ್ಲಿಯೂ ಹೇಳಿಕೊಳ್ಳುವುದಿಲ್ಲ. ಅಧಿಕಾರ ಶಾಶ್ವತವಲ್ಲ. ಆದರೆ ನಾವು ಮಾಡುವ ಅಭಿವೃದ್ಧಿ ಕೆಲಸಗಳು ರೈತರಿಗೆ ಹಲವು ವರ್ಷಗಳವರೆಗೆ ಉಪಯುಕ್ತವಾಗುತ್ತದೆ. ನಾವು ಸೋಲಾರ್ ವಿದ್ಯುತ್ ಅನ್ನು  ರೈತರ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನೀಡುತ್ತೇವೆ ಎಂದರು. 
ಶಾಸಕ ರಾಜಣ್ಣ ಅವರು ಒಳ್ಳೆಯ ಕೆಲಸಗಳನ್ನು ಮಾಡಿದ್ದು ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ವಕ್ಕಲಿಗ ಮತದಾರರಲ್ಲಿ ಮನವಿ ಮಾಡಿದರು. ರಾಜಣ್ಣ ಅವರನ್ನು ಗೆಲ್ಲಿಸಿದರೇ ಅದು ನನ್ನ ಗೆಲುವಾಗುತ್ತದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ