ಅಮಿತ್ ಶಾ 
ರಾಜಕೀಯ

ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಬಿಜೆಪಿ ಪ್ಲಾನ್: ಮತ್ತೆ ಬೆಂಗಳೂರಲ್ಲಿ ಅಮಿತ್ ಶಾ ಕ್ಯಾಂಪೈನ್

ಈಶಾನ್ಯ ರಾಜ್ಯಗಳಲ್ಲಿ ಕಮಲ ಅರಳಿಸಿ ಅಧಿಕಾರದ ಗದ್ದಗೆ ಏರಿರುವ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ಕರ್ನಾಟಕದಲ್ಲೂ ಇದೇ ಮ್ಯಾಜಿಕ್ ಮಾಡಲು ಮುಂದಾಗಿದೆ...

ಬೆಂಗಳೂರು: ಈಶಾನ್ಯ ರಾಜ್ಯಗಳಲ್ಲಿ ಕಮಲ ಅರಳಿಸಿ ಅಧಿಕಾರದ ಗದ್ದಗೆ ಏರಿರುವ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ಕರ್ನಾಟಕದಲ್ಲೂ ಇದೇ ಮ್ಯಾಜಿಕ್ ಮಾಡಲು ಮುಂದಾಗಿದೆ.
ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದಾಗಿ ಪಣ ತೊಟ್ಟಿರುವ ಬಿಜೆಪಿ, ಪ್ರಧಾನಿ ಮೋದಿ ಅವರನ್ನು ಪದೇ ಪದೇ ಕರ್ನಾಟಕಕ್ಕೆ ಭೇಟಿ ನೀಡಲು ವೇದಿಕೆ ಸಿದ್ದಪಡಿಸುತ್ತಿದೆ.
ಭಾನುವಾರ ಸಭೆ ಸೇರಿದ್ದ ಬಿಜೆಪಿ ಕೋರ್ ಕಮಿಟಿ  ಮುಂದಿನ ಹಂತದ ಚುನಾವಣಾ ಪ್ರಚಾರದ ಯೋಜನೆ ಸಿದ್ಧಪಡಿಸಿದೆ, ರಾಯಚೂರಿನಲ್ಲಿ ಮಾರ್ಚ್ 13 ರಂದು ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ, ಬೆಳಗಾವಿ ಬದಲು ಮೋದಿ ಚಿಕ್ಕೋಡಿಗೆ ಭೇಟಿ ನೀಡಲಿದ್ದಾರೆ, ಚಿಕ್ಕೋಡಿ ಸಭೆಯ ದಿನಾಂಕ ಇನ್ನೆರಡು ದಿನಗಳಲ್ಲಿ ನಿಗದಿ ಪಡಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಸದ್ಯ ನಡೆಯುತ್ತರು ಸೇವ್ ಬೆಂಗಳೂರು ಪಾದಯಾತ್ರೆ ಕೊನೆಗೊಳ್ಳಲಿದ್ದು, ಮಾರ್ಚ್ 15 ರಂದು ಅಮಿತ್ ಶಾ ಬೆಂಗಳೂರಲ್ಲಿ ಬೃಹತ್ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ