ರಾಜಕೀಯ

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನಿಂದ ರೋಶನ್ ಬೇಗ್, ಸ್ಯಾಮ್ ಪಿಟ್ರೊಡಾ ಸ್ಪರ್ಧೆ?

Sumana Upadhyaya

ಬೆಂಗಳೂರು: ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಮತ್ತು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರಿಗೆ ಆಪ್ತರಾಗಿದ್ದ  ಸ್ಯಾಮ್ ಪಿಟ್ರೊಡಾ ಅವರು ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ನಾಮಾಂಕಿತಗೊಳ್ಳುವವರಲ್ಲಿ ಮುಂಚೂಣಿಯಲ್ಲಿದ್ದಾರೆ.

ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಜೊತೆ ಸಭೆ ನಡೆಸಿದ್ದು ರಾಜ್ಯಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರು. ನಾಲ್ವರು ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ನ 122 ಸದಸ್ಯರಿದ್ದು ಸ್ವತಂತ್ರ ಮತ್ತು ಜೆಡಿಎಸ್ ನ ಬಂಡಾಯ ಶಾಸಕರೊಂದಿಗೆ ಮೂವರು ಅಭ್ಯರ್ಥಿಗಳನ್ನು ಆಯ್ಕೆಮಾಡುವ ಸ್ಥಿತಿಯಲ್ಲಿದೆ. ರಾಜ್ಯಸಭಾ ಸದಸ್ಯರಾಬೇಕಾದರೆ ಪ್ರತಿ ಅಭ್ಯರ್ಥಿ 44 ಮತಗಳನ್ನು ಪಡೆಯಬೇಕು.
ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಯಾಮ್ ಪಿಟ್ರೊಡಾ, ರೋಶನ್ ಬೇಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ್ ದ್ವಿವೇದಿ ಮತ್ತು ಚೆನ್ನ ರೆಡ್ಡಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಿಟ್ರೊಡಾ ಅವರ ಹೆಸರನ್ನು ಸಭೆಯಲ್ಲಿ ಚರ್ಚೆ ನಡೆಸಿರುವುದನ್ನು ನಿರಾಕರಿಸಿದ್ದಾರೆ.

SCROLL FOR NEXT