ರಾಜ್ಯಸಭೆ ಚುನಾವಣೆಗೆ ಜೆಡಿ(ಎಸ್) ಸಜ್ಜು, ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ನಾಮಪತ್ರ ಸಲ್ಲಿಕೆ 
ರಾಜಕೀಯ

ರಾಜ್ಯಸಭೆ ಚುನಾವಣೆಗೆ ಜೆಡಿ(ಎಸ್) ಸಜ್ಜು, ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ನಾಮಪತ್ರ ಸಲ್ಲಿಕೆ

ರಾಜ್ಯ ಸಬಾ ಚುನಾವಣೆಗೆ ಜೆಡಿ(ಎಸ್) ಅಭ್ಯರ್ಥಿಯ ಆಯ್ಕೆ ಅಂತಿಮಗೊಂಡಿದೆ.

ಬೆಂಗಳೂರು: ರಾಜ್ಯಸಬಾ ಚುನಾವಣೆಗೆ ಜೆಡಿ(ಎಸ್) ಅಭ್ಯರ್ಥಿಯ ಆಯ್ಕೆ ಅಂತಿಮಗೊಂಡಿದೆ. ರಾಜ್ಯಸಭೆ ಚುನಾವಣೆಯ ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಜೆಡಿ(ಎಸ್) ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿಆಗಿರುವ ಫಾರೂಕ್ ಮಂಗಳೂರು ಮೂಲದ ಕೈಗಾರಿಕೋದ್ಯಮಿ ಸಹ ಆಗಿದ್ದು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಅಭ್ಯರ್ಥಿ ನಾಮಪತ್ರದ ಸೂಚಕವಾಗಿ ಪಕ್ಷದ ನಾಯಕರುಗಳಾದ ನಾಯಕ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಬಾಲಕೃಷ್ಣ, ಎಚ್.ಕೆ.ಕುಮಾರಸ್ವಾಮಿ, ಎಂ.ಟಿ.ಕೃಷ್ಣಪ್ಪ ಇನ್ನೂ ಮೊದಲಾದ ಹತ್ತು ಮಂದಿ ಶಾಸಕರು ಸಹಿ ಹಾಕಿದ್ದಾರೆ.
ಕಳೆದ ಬಾರಿ ಸಹ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಾರೂಕ್ ತಾವು ಪರಾಜಯ ಅನುಭವಿಸಿದ್ದರು. .ಇದೀಗ ಮತ್ತೆ ನಾಮಪತ್ರ ಸಲ್ಲಿಸಿ ಚುನಾವಣೆಗೆ ಸ್ಪರ್ಧೆ ನಡೆಸುತ್ತಿದ್ದಾರೆ. 
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿ ಆಯ್ಕೆ ಸಂಬಂಧ ಮಾರ್ಚ್ 23ರಂದು ಚುನಾವಣೆ ನಡೆಯುತ್ತಿದ್ದು  ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದೆ.
ಇನ್ನು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ರಾಜ್ಯಸಭೆಗಾಗಿ ತಮ್ಮ ಅಭ್ಯರ್ಥಿಗಳಾರು ಎನ್ನುವುದನ್ನು ಇನ್ನೂ ಪ್ರಕಟಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!