ಜೆಡಿಎಸ್ ಅಧಿಕಾರಕ್ಕೆ ಬಂದರೆ 50 ಸಾವಿರ ಕೋಟಿ ಕೃಷಿ ಸಾಲಮನ್ನಾ: ಕುಮಾರ ಸ್ವಾಮಿ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 50 ಸಾವಿರ ಕೋಟಿ ರು. ಕೃಷಿ ಸಾಲಮನ್ನಾ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...
ಹಾಸನ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 50 ಸಾವಿರ ಕೋಟಿ ರು. ಕೃಷಿ ಸಾಲಮನ್ನಾ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನದಲ್ಲಿ ವಿಕಾಸ ಪರ್ವ ರ್ಯಾಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೇ ಅಷ್ಟು ದೊಡ್ಡ ಪ್ರಮಾಣದ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ. 50 ಸಾವಿರ ಕೋಟಿ ರು ಹಣ ಕಡಿಮೆ ಮೊತ್ತವಲ್ಲ, ರಾಜ್ಯದ ಖಜಾನೆಗೆ ಭಾರವಾಗದಂತೆ ಸರಿದೂಗಿಸುವುದನ್ನು ನನ್ನ ತಂದೆ ನನಗೆ ಕಲಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಪ್ರಸ್ತುತ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ 1.35 ರು ಕೋಟಿ ಸಾಲ ತೆಗೆದುಕೊಂಡಿದ್ದಾರೆ, ರೈತರ ಸಾಲಮನ್ನಾ ಮಾಡಲು ನಾನು ಮತ್ತೆ ಸಾಲ ಪಡೆಯುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.