ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ 
ರಾಜಕೀಯ

ರಾಜ್ಯ ಬಿಜೆಪಿ ಕಾರ್ಯದರ್ಶಿಗೆ ತಲೆ ಸರಿಯಿಲ್ಲ; ಸಚಿವ ಯು.ಟಿ. ಖಾದರ್

ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ...

ಬೆಂಗಳೂರು: ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ. 
ರವಿಕುಮಾರ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆ ಜನರಿಗೆ ಖಾದರ್ ಹಾಗೂ ರಮಾನಾಥ ರೈ ಬಗ್ಗೆ ತಿಳಿದಿದೆ. ಮೂರ್ಖರಂತೆ ಮಾತನಾಡಿರುವ ಬಿಜೆಪಿ ನಾಯಕರಿಂದ ಅವರಿಗೆ ನಮ್ಮ ಬಗ್ಗೆ ಪ್ರಮಾಣಪತ್ರಗಳ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 
ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕೆಲವರಿಗೆ ರೋಗ ಬಂದಂತಾಗುತ್ತದೆ. ಹೀಗಾಗಿಯೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಗಳಿಗೆ ತಲೆ ಸರಿಯಿಲ್ಲ. ಹೀಗಾಗಿ ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡುವ ಅಗತ್ಯವೂ ಇಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಮತ್ತು ತ್ರಿಪುರ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡುವ ಸಲುವಾಗಿ ಬಿಜೆಪಿ ಪ್ರತ್ಯೇಕತಾವಾದಿಗಳೊಂದಿಗೆ ಕೈ ಜೋಡಿಸಿದೆ. ಅಧಿಕಾರಕ್ಕೆ ಬರಲು ಬಿಜೆಪಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ಇದಕ್ಕೆ ಉತ್ತರ ನೀಡಬೇಕಿದೆ ಎಂದಿದ್ದಾರೆ. 
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ಹೀಗಾಗಿ ಅವರು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಶಾಂತಿ ಹಾಗೂ ಒಗ್ಗಟ್ಟಿನ ಹಿತದೃಷ್ಟಿಯಿಂದಾದರೂ ಬಿಜೆಪಿಯವರು ಇಂತಹ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT