ಸಿದ್ದರಾಮಯ್ಯ 
ರಾಜಕೀಯ

ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು....

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ಹೊಸದುರ್ಗದಲ್ಲಿ ರಾಜ್ಯ ಸರ್ಕಾರದ ಸಾಧನ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿಎಂ, ಉತ್ತರ ಪ್ರದೇಶ ಮತ್ತು ಬಿಹಾರ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಗೋರಖ್ ಪುರ ಮತ್ತು ಪಲ್ಪುರ್ ಸೇರಿದಂತೆ ಐದು ಸ್ಥಾನಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಇದು ಜನ ಸುಳ್ಳು ಹೇಳುವ ಮೋದಿ ಜತೆ ಇಲ್ಲ ಎಂಬುದರ ಸ್ಪಷ್ಟ ಸೂಚನೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಸೋತಿದ್ದು, ಇದರೊಂದಿಗೆ ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಇದಕ್ಕು ಮುನ್ನ ಚಿತ್ರದುರ್ಗದಲ್ಲಿ ವರದಿಗಾರರೊಂದಿಗೆ ಮಾತನಾಡಿದ್ದ ಸಿಎಂ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರಿನಲ್ಲೇ ಬಿಜೆಪಿ‌ ಸೋತಿದೆ. ಇನ್ನು ಅವರು ಕರ್ನಾಟದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತಾರಾ? 'ಅಲ್ಲಿ ಸಲ್ಲದವರು ಇಲ್ಲಿ ಸಲ್ಲರಯ್ಯ, ಇಲ್ಲಿ ಸಲ್ಲುವರು ಅಲ್ಲೂ ಸಲ್ಲುವರಯ್ಯ...' ಎಂದು ವ್ಯಂಗ್ಯವಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!