ಸಂಗ್ರಹ ಚಿತ್ರ 
ರಾಜಕೀಯ

ಕರ್ನಾಟಕಕ್ಕೆ ಪಾಠ ಮಾಡುವ ಬದಲು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಿ: ಯೋಗಿ ಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಕರ್ನಾಟಕಕ್ಕೆ ಪಾಠ ಮಾಡುವ ಬದಲು ನಿಮ್ಮ ರಾಜ್ಯದ ಅಭಿವೃದ್ಧಿ ವಿಚಾರದತ್ತ ಹೆಚ್ಚು ಗಮನಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ಕಾಲೆಳೆದಿದ್ದಾರೆ.

ಬೆಂಗಳೂರು: ಕರ್ನಾಟಕಕ್ಕೆ ಪಾಠ ಮಾಡುವ ಬದಲು ನಿಮ್ಮ ರಾಜ್ಯದ ಅಭಿವೃದ್ಧಿ ವಿಚಾರದತ್ತ ಹೆಚ್ಚು ಗಮನಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ಕಾಲೆಳೆದಿದ್ದಾರೆ.
ಉತ್ತರ ಪ್ರದೇಶ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿರುವ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮತ್ತು ಬಿಜೆಪಿ ಮುಖಂಡರಿಗೆ ಟಾಂಗ್ ನೀಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಗೋರಖ್ ಪುರ ಮತ್ತು ಫುಲ್ಪುರ ಲೋಕಸಭಾ ಕ್ಷೇತ್ರಗಳ ಗೆಲುವಿಗಾಗಿ ನಾನು ಎಸ್ ಪಿ ಮತ್ತು ಬಿಎಸ್ ಪಿ ಪಕ್ಷವನ್ನು ಅಭಿನಂದಿಸುತ್ತೇನೆ. ಬಿಜೆಪಿಯೇತರ ಪಕ್ಷಗಳ ಏಕತೆಯಿಂದಾಗಿ ಇಂದು ಉಪ ಚುನಾವಣೆಯಲ್ಲಿ ಗೆಲುವು ದೊರೆತಿದೆ. ಈಗಲಾದರೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಕರ್ನಾಟಕದ ಬಗ್ಗೆ ಉಪದೇಶ ನೀಡುವ ಬದಲು ತಮ್ಮ ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ