ಬೆಂಗಳೂರು: 2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿರುವ ಜೆಡಿಎಸ್ 7 ಬಂಡಾಯ ಶಾಸಕರ ಅನರ್ಹತೆ ಸಂಬಂಧಿತ ಪಕ್ಷ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೇ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿದ್ದರಿಂದಾಗಿ ಅವರ ವಿರುದ್ಧ ವಿಧಾನಸಭಾ ಸ್ಪೀಕರ್‌ಗೆ ದೂರು ನೀಡಲಾಗಿತ್ತು. ಆದರೆ, ಸ್ಪೀಕರ್ ಇಲ್ಲಿಯವರೆಗೂ ಕ್ರಮ ತೆಗೆದುಕೊಂಡಿಲ್ಲ,
ಈ ಸಂಬಂಧ ವಿಧಾನಸಭೆ ಸ್ಪೀಕರ್ ಕಚೇರಿಗೆ ಗುರುವಾರ ಪತ್ರ ಸಲ್ಲಿಸಿರುವ ಜೆಡಿಎಸ್, ತಮ್ಮ ಅರ್ಜಿಯನ್ನು ಹಲವು ತಿಂಗಳುಗಳಿಂದ ವಿಚಾರಣೆಗೆ ತೆಗೆದು ಕೊಂಡಿಲ್ಲ, ಈ ಸಂಬಂಧ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ಸ್ಪೀಕರ್ ಅವರು ಈ ವಿಷಯವನ್ನು ಪರಿಗಣನೆಗೆ ತೆಗೆದುಕೊಂಡು ಶನಿವಾರ ಅಥವಾ ಸೋಮವಾರ ವಿಚಾರಣೆ ನಡೆಸಬೇಕೆಂದು ಕೋರಿದೆ.
ಮಾರ್ಚ್ 23 ರಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಪಕ್ಷದಿಂದ ಉಚ್ಚಾಟಿಸಿರುವ 7 ಬಂಡಾಯ ಅಭ್ಯರ್ಥಿಗಳು ಮತ ಚಲಾಯಿಸದಂತೆ ತಡೆಯಲು ಈ ಕ್ರಮ ಕೈಗೊಂಡಿದೆ.