ಬಿಎಸ್ ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ ಬ್ರೇಕಿಂಗ್ ನ್ಯೂಸ್: ಸಿದ್ದರಾಮಯ್ಯ ವಚನಭ್ರಷ್ಟ, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಾವು ಹೇಳಿದಂತೆ ಶುಕ್ರವಾರ....

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಾವು ಹೇಳಿದಂತೆ ಶುಕ್ರವಾರ 'ಬ್ರೇಕಿಂಗ್ ನ್ಯೂಸ್' ಕೊಟ್ಟಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಭರವಸೆ ಹುಸಿಯಾಗಿದೆ. ಇದು ವಚನ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದಾರೆ.
ನಿನ್ನೆ ಬ್ರೇಕಿಂಗ್ ನ್ಯೂಸ್ ಕೊಡುತ್ತೇನೆ ಎಂದು ಹೇಳಿ ಟ್ವೀಟ್ ಮಾಡಿ ಬಾಂಬ್ ಸಿಡಿಸುವ ನಿರೀಕ್ಷೆ ಹುಟ್ಟಿಸಿದ್ದ ಬಿಎಸ್ ವೈ ಎಂದಿನಂತೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಠುಸ್ ಪಟಾಕಿ ಆಗಿದ್ದಾರೆ.
ಇಂದು ಸಂಜೆ 5.40ಕ್ಕೆ ಫೇಸ್‌ಬುಕ್ ನಲ್ಲಿ ಪ್ರತ್ಯಕ್ಷರಾದ ಯಡಿಯೂರಪ್ಪ, ನಿಮಿಷದ ವಿಡಿಯೋದಲ್ಲಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದೆ. ರಾಜ್ಯದ ಜನರ ಮೇಲೆ ಸಾಲದ ಹೊರೆಯನ್ನು ಹೊರಿಸಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ ಎಂದು ಆರೋಪಿಸಿದ್ದಾರೆ.
ಜನರು ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ ಎಂದು ಸರ್ಕಾರ ಹೇಳಿತ್ತು. ಆದರೆ, ಜನರು ಇಟ್ಟ ಭರವಸೆಯನ್ನು ಸರ್ಕಾರ ಉಳಿಸಿಕೊಂಡಿಲ್ಲ.  ಕಳೆದ 5 ವರ್ಷಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಹಿಂದಿನ ಯಾವ ಸರ್ಕಾರವೂ ಮಾಡದಷ್ಟು ಸಾಲವನ್ನು ಈ ಸರ್ಕಾರ ಮಾಡಿದೆ. ಪ್ರತಿಯೊಬ್ಬ ಕನ್ನಡಿಗನ ಮೇಲೆ 45 ಸಾವಿರ ರೂ. ಸಾಲದ ಹೊರೆಯನ್ನು ಸರ್ಕಾರ ಹೊರಿಸಿದೆ ಎಂದರು.
ಕೃಷಿ, ಸೇವೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತವಾಗಿದೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿಯೂ ಅಭಿವೃದ್ಧಿ ಕುಂಠಿತವಾಗಿದೆ. ನೀರಾವರಿ ಕ್ಷೇತ್ರದಲ್ಲಿ ಯೋಜನೆಗಳು ಸ್ಥಗಿತಗೊಂಡಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಅಭಿವೃದ್ಧಿಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಬೇಕಿದೆ.  ರಾಜ್ಯದ ಜನರಿಗೆ ನಂಬಿಕೆ ದ್ರೋಹ, ವಿಶ್ವಾಸ ದ್ರೋಹ ಮಾಡಿದ ಸರ್ಕಾರವನ್ನು ಜನರು ದೂರವಿಡಬೇಕಾಗಿದೆ.  ರಾಜ್ಯದ ಪರಿಸ್ಥಿತಿಯನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT