ಜೆಡಿಎಸ್ ನ ಬಂಡಾಯ ಶಾಸಕರು 
ರಾಜಕೀಯ

ರಾಹುಲ್ ಕರ್ನಾಟಕ ಭೇಟಿ ಸಂದರ್ಭ ಏಳು ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ರಾಹುಲ್ ಗಾಂಧಿ ಇದೇ ತಿಂಗಳ 24 ಹಾಗೂ 25 ರಂದು ಮೈಸೂರು , ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ನ ಬಂಡಾಯ ಶಾಸಕರುಗಳು ಕೈ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಮೈಸೂರು: ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿನ ಯಶಸ್ವಿ ಜನಾಶೀರ್ವಾದ ಯಾತ್ರೆಯ ಬಳಿಕ ರಾಹುಲ್ ಗಾಂಧಿ ಇದೀಗ ಮೂರನೇ ಹಂತದಲ್ಲಿ ಇದೇ ತಿಂಗಳ 24 ಹಾಗೂ 25 ರಂದು  ಮೈಸೂರು , ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.

ರಾಹುಲ್ ಗಾಂಧಿ ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತಿತರ ಕಡೆಗಳಲ್ಲೂ ಪ್ರವಾಸ ನಡೆಸಲಿದ್ದಾರೆ.ರಾಹುಲ್ ಗಾಂಧಿ ಅವರ ಈ   ಯಾತ್ರೆ ಯಶಸ್ವಿಗೊಳಿಸಲು ಕಾಂಗ್ರೆಸ್ ಪಣತೊಟ್ಟಿದೆ.

ಮೈಸೂರಿನ ಮಹಾರಾಜ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಕನ್ನಡ ಸಾಹಿತ್ಯ ಸಮ್ಮೇಳನ, ಅಂತಾರಾಷ್ಟ್ರೀಯ ಅಂಬೇಡ್ಕರ್ ಸಮ್ಮೇಳನ, ದಸರಾ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ ಲೋಕೋಪಯೋಗಿ ಸಚಿವ ಡಾ. ಎಚ್. ಸಿ. ಮಹಾದೇವಪ್ಪ ಅವರಿಗೆ ಇದರ ಜವಾಬ್ದಾರಿ ವಹಿಸಲಾಗಿದೆ.

 ಈ ಸಂದರ್ಭದಲ್ಲಿ ಜೆಡಿಎಸ್ ನ ಬಂಡಾಯ ಶಾಸಕರುಗಳಾದ ಎನ್. ಚಲುವರಾಯಸ್ವಾಮಿ, ಎಚ್. ಸಿ. ಬಾಲಕೃಷ್ಣ, ಜಮ್ಮೀರ್ ಅಹಮ್ಮದ್ ಖಾನ್, ಅಖಂಡ ಶ್ರೀನಿವಾಸ ಮೂರ್ತಿ, ಇಕ್ಬಾಲ್ ಅನ್ಸಾರಿ, ರಮೇಶ್ ಬಂಡಿಸಿದ್ದೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಈ ನಾಯಕರು ಕಾಂಗ್ರೆಸ್ ಪರ ಗುರುತಿಸಿಕೊಂಡಿದ್ದು, ಅಂದು ಅಧಿಕೃತವಾಗಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT